ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು 6 ಹೊಸ ಕೋರ್ಸ್‌ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಅನುಮೋದನೆ ನೀಡಿದೆ. ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ.

ಐಟಿಐ ಕಲಿತರೆ ಉದ್ಯೋಗ ಖಾತರಿ ಎನ್ನುವಂತಹ ಪರಿಸ್ಥಿತಿಯಿದೆ. ಅದಕ್ಕೆ ತಕ್ಕೆಂತ ಐಟಿಐ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದಿಲ್ಲೊಂದು ಕಡೆಗೆ ಉದ್ಯೋಗ ಖಾತ್ರಿಯಾಗಿ ಸಿಗುತ್ತಿದೆ. ಜೊತೆಗೆ ಐಟಿಐ ತರಬೇಟಿ ಸಂಸ್ಥೆಗಳನ್ನು ಉನ್ನತ ದರ್ಜೆಗೆ ಏರಿಸಲು ಸರ್ಕಾರ ಕೂಡ ಕ್ರಮ ಕೈಗೊಳ್ಳುತ್ತಿದೆ. ಈ ಮೂಲಕ ITI ಕಲಿಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಪ್ರಸಕ್ತ ಸಾಲಿನಿಂದ ಐಟಿಐಗೆ 6 ಹೊಸ ಕೋರ್ಸ್ಗಳನ್ನು ಸೇರ್ಪಡೆ ಮಾಡಲಾಗಿದೆ. ಇದಕ್ಕೆ ರಾಜ್ಯ ವೃತ್ತಿ ಶಿಕ್ಷಣ ಪರಿಷತ್ ಅನುಮೋದನೆ ನೀಡಿದೆ. ಪ್ರಸಕ್ತ ಸಾಲಿನಿಂದ ಹೊಸ ಕೋರ್ಸ್‌ಗೆ ಸೇರಲು ಅವಕಾಶ ನೀಡಲಾಗುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ನಿರ್ಣಯವು ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗುತ್ತದೆ. ಈ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಐಟಿಐ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಐಟಿಐನಿಂದ ಸ್ವ ಉದ್ಯೋಗವನ್ನೂ ಮಾಡಬಹುದು. ಜೊತೆಗೆ ಕೈಗಾರಿಕೆಗಳಲ್ಲಿಯೂ ಉದ್ಯೋಗಕ್ಕೆ ಅವಕಾಶವಿದೆ. ಹೀಗಾಗಿ ಅನೇಕ ವಿದ್ಯಾರ್ಥಿಗಳು ಐಟಿಐ ಕಲಿಕೆಗೆ ಮುಂದೆ ಬರುತ್ತಿದ್ದಾರೆ. ಹೀಗಾಗಿ ಕೈಗಾರಿಕೆಯಲ್ಲಿ ಉದ್ಯೋಗಕ್ಕೆ ಅನುಕೂಲವಾಗುವಂತೆ ಹೊಸದಾಗಿ ಆರು ಕೋರ್ಸ್‌ಗಳನ್ನು ಸೇರಿಸಲಾಗಿದೆ. ಆ ಮೂಲಕ ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಹೊಸ ಭರವಸೆಯನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ.

ಹೊಸ ITI ಕೋರ್ಸ್‌ಗಳ ವಿವರ ಈ ರೀತಿಯಾಗಿದೆ. ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ), ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ), ಅಡ್ವಾನ್ಸ್ಡ್ ಮ್ಯಾನಫ್ಯಾಕ್ಚರಿಂಗ್ (1 ವರ್ಷ), ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ), ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನಫ್ಯಾಕ್ಚರ್ (1 ವರ್ಷ), ಮ್ಯಾನಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ), ಈ 6 ಸಂಯೋಜನೆಗಳು ಐ.ಟಿ.ಐ.ಗೆ ಸೇರ್ಪಡೆಯಾಗುತ್ತವೆ ಎಂದು ಅಶ್ವಥ್ ನಾರಾಯಣ ವಿವರಿಸಿದ್ದಾರೆ.

ಈ ಹಿಂದೆ ಡಿಪ್ಲೊಮಾ ಇಂಜಿನಿಯರಿಂಗ್‌ನಲ್ಲಿದ್ದ 33 ಕೋರ್ಸ್‌ಗಳೊಂದಿಗೆ 8 ಹೊಸ ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನ ಮಾಡಿತ್ತು. ಇದೀಗ ಅದೇ ಮಾದರಿಯಲ್ಲಿ ಐಟಿಐಗೂ ಹೊಸ ಕೋರ್ಸ್‌ಗಳನ್ನು ಸೇರಿಸಲಾಗಿದೆ. ಅಂತಿಮವಾಗಿ ಈ ಸಂಯೋಜನೆಗಳಿಗೆ ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ (ಎನ್.ಸಿ.ವಿ.ಇ.ಟಿ.) ಮಾನ್ಯತೆ ಕೊಡಬೇಕು. ಅದಕ್ಕೆ ಪೂರಕವಾಗಿ ಈ 6 ಸಂಯೋಜನೆಗಳಿಗಾಗಿ ಸಿದ್ಧಪಡಿಸಲಾಗಿರುವ ಪಠ್ಯಕ್ರಮಕ್ಕೆ ನವದೆಹಲಿಯ ತರಬೇತಿ ಮಹಾನಿರ್ದೇಶನಾಲಯದಿಂದ (ಡಿ.ಜಿ.ಟಿ.) ಅನುಮೋದನೆ ಪಡೆಯಬೇಕಾಗಿರುತ್ತದೆ.

ಈಗ ರಾಜ್ಯ ಸರ್ಕಾರವು ಈ ಸಂಯೋಜನೆಗಳ ಪಠ್ಯಕ್ರಮವನ್ನು ಡಿ.ಜಿ.ಟಿ.ಗೆ ಸಲ್ಲಿಸಿದ್ದು, ಅದು ಪ್ರಕ್ರಿಯೆಯಲ್ಲಿದೆ. ಆದರೆ, ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಎನ್.ಸಿ.ವಿ.ಇ.ಟಿ.ಯಿಂದ ಈ 6 ಸಂಯೋಜನೆಗಳಿಗೆ ಮಾನ್ಯತೆ ಪಡೆಯುವ ಷರತ್ತಿಗೊಳಪಟ್ಟು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದೂ ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಇದೇ ಸಭೆಯಲ್ಲಿ, 3 ತಿಂಗಳ ಅವಧಿಯ 23 ಅಲ್ಪಾವಧಿ ಸರ್ಟಿಫೈಡ್ ಕೋರ್ಸ್‌ಗಳಿಗೆ ಕೂಡ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಡಾ. ಹರೀಶ್ ಕುಮಾರ್ ಕೆ. ಮತ್ತಿತರರು ಇದ್ದರು.

ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!