KSRTC ಮತ್ತು BMTC ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ! ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನೌಕರರ ಮಕ್ಕಳ ಮನವಿಗೆ ಸರ್ಕಾರ ಸ್ಪಂದಿಸಿದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆಎಸ್‌ಆರ್ ಟಿಸಿ, ಬಿಎಂಟಿಸಿ ನೌಕರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಡಿಸೆಂಬರ್ ತಿಂಗಳ ಸಂಬಳವನ್ನು 10 ದಿನದೊಳಗೆ ನೀಡುತ್ತೇವೆ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ ನವೆಂಬರ್ ತಿಂಗಳ ತನಕ ಎಲ್ಲಾ ನೌಕರರಿಗೆ ಸಂಬಳ ನೀಡಲಾಗಿದೆ. ಡಿಸೆಂಬರ್ ತಿಂಗಳ ಸಂಬಳವನ್ನು 8 ರಿಂದ 10 ದಿನದೊಳಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ನೌಕರರಿಗೆ ಮೂರು ತಿಂಗಳ ವೇತನ ಬಿಡುಗಡೆಗೆ ಮನವಿ ಮಾಡಿದ್ದರು. ಮನವಿ ಸ್ಪಂದಿಸಿದ ಮುಖ್ಯಮಂತ್ರಿಗಳು ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳ ವೇತನ 634.50 ಕೋಟಿ ರು. ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರ ಮೂರು ತಿಂಗಳ ವೇತನ 634.50 ಕೋಟಿ ರು. (ಶೇ.75) ಬಿಡುಗಡೆ ಮಾಡಿದರೆ, ಉಳಿದ ಶೇ.25ರಷ್ಟನ್ನು ಆಯಾ ಸಾರಿಗೆ ನಿಗಮಗಳು ತಮ್ಮದೇ ಸಂಪನ್ಮೂಲ ಬಳಸಿಕೊಂಡು ಭರಿಸಲಿವೆ. ಮುಖ್ಯಮಂತ್ರಿಗಳ ಸ್ಪಂದನೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಸುಮಾರು 1.30 ಲಕ್ಷ ನೌಕರರಿಗೆ ವೇತನ ಪಾವತಿ ಸಾಧ್ಯವಾಗಲಿದೆ. ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸಾರಿಗೆ ನಿಗಮಗಳ ಪರವಾಗಿ ಕೃತಜ್ಞತೆ ಅರ್ಪಿಸುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ.ಟಿ. ದೇವೇಗೌಡ ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ. ಈಗಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಅವರ ಬೇಡಿಕೆ ಈಡೇರಿಸಲು ಕಷ್ಟವಾಗಲಿದೆ ಎಂದರು. ಕೊರೋನಾದಿಂದ ಆದಾಯ ಇಲ್ಲದೆ ಸಾರಿಗೆ ನಿಗಮಗಳು ತೀವ್ರ ಸಂಕಷ್ಟಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್‌ ಅರ್ಧ ತಿಂಗಳು ಕಳೆದರೂ ನೌಕರರಿಗೆ ಅಕ್ಟೋಬರ್‌ ತಿಂಗಳ ವೇತನ ಪಾವತಿ ಮಾಡಿರಲಿಲ್ಲ.

ದೀಪಾವಳಿ ಆಚರಿಸಲು ವೇತನ ಇಲ್ಲ ಎಂದು ಸಾರಿಗೆ ನೌಕರರು ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ನೌಕರರ ಮಕ್ಕಳು ಸಹ ತಮ್ಮ ತಂದೆಯ ವೇತನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು.

Leave a Reply

Your email address will not be published. Required fields are marked *