ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೇಶವನ್ನುದ್ದೇಶಿಸಿ ಮಾತನಾಡಿದ ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಒಂದು ಸಿಹಿಸುದ್ದಿಯನ್ನು ನೀಡಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಲಾಕ್ಡೌನ್ ಅನ್ನು ಮುಂದುವರೆಸುವುದು ಇಲ್ಲ ಎನ್ನುವ ಸ್ಪಷ್ಟನೆ ನೀಡಿದ ನರೇಂದ್ರ ಮೋದಿ ಅವರು ಹೀಗಾದರೆ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿ ಇರುವಂತಹ ಬಡಜನರಿಗೆ ಮುಂದಿನ ದೀಪಾವಳಿಯ ವರೆಗೂ ಉಚಿತವಾಗಿ ಪಡಿತರವನ್ನು ವಿತರಣೆ ಮಾಡುವ ಯೋಜನೆಯನ್ನು ರೂಪಿಸುವುದು ಭರವಸೆಯನ್ನು ನೀಡಿದ್ದಾರೆ.
ಮಂಗಳವಾರ ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ ಅಂತ್ಯದ ವರೆಗೂ ಉಚಿತವಾಗಿ ಪಡಿತರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುಮಾರು 80 ಕೋಟಿ ಜನರಿಗೆ ಉಚಿತವಾಗಿ ಪಡಿತರವನ್ನು ವಿತರಣೆ ಮಾಡಲಾಗುವುದು. ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ ಯನ್ನು ನೀಡಲಾಗುವುದು ಹಾಗೂ ಇದರ ಜೊತೆಗೆ ಒಂದು ಕುಟುಂಬಕ್ಕೆ ಒಂದು ಕೆಜಿ ಬೇಳೆ ಕಾಳನ್ನು ಸಹ ವಿತರಿಸಲಾಗುವುದು ಎಂದು ಹೇಳಿದರು. ಸರ್ಕಾರವು ಬಡ ಜನರಿಗೆ ಉಚಿತವಾಗಿ ಆಹಾರವನ್ನು ನೀಡಲು ಇಂದು ಸಫಲವಾಗಿದ್ದಾರೆ ಅದರ ಕೀರ್ತಿ ಇಬ್ಬರಿಗೆ ಮಾತ್ರ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.
ಒಂದು ದೇಶದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ರೈತರು ಮತ್ತು ಪ್ರಾಮಾಣಿಕವಾಗಿ ತೆರಿಗೆಯನ್ನು ಪಾವತಿ ಮಾಡುತ್ತಿರುವವರು. ಇವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗರೀಬಿ ಕಲ್ಯಾಣ ಯೋಜನೆಯ ಅಡಿಯಲ್ಲಿ 1.75 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗಿದೆ. ಮೂರು ತಿಂಗಳಲ್ಲಿ 31 ಸಾವಿರ ಕೋಟಿ ರೂಪಾಯಿಯನ್ನು ಸುಮಾರು 20 ಕೋಟಿ ಬಡಕುಟುಂಬಗಳ ಖಾತೆಗೆ ಜಮೆ ಮಾಡಲಾಗಿದೆ. ಅದಲ್ಲದೆ 18 ಸಾವಿರ ಕೋಟಿ ರೂಪಾಯಿಯನ್ನು 9 ಸಾವಿರಕ್ಕೂ ಹೆಚ್ಚು ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಇಂದು ದೇಶದ ಪ್ರಧಾನ ಮಂತ್ರಿ ಆದ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ದೇಶದ ಜನತೆಗೆ ನವೆಂಬರ್ ವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುವ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ.