ಕೊರೋನಾ ವೈರಸ್ ಭಾರತದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಇಡಿ ದೇಶ 21 ದಿನಗಳ ಲಾಕ್ ಡೌನ್ ಆಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 2 ತಿಂಗಳ ಪಡಿತರ ವಿತರಣೆ ಮಾಡಲಾಗುವುದು ಎಂದು ಘೋಷಿಸಿತ್ತು.
ಅದರಂತೆ ಏಪ್ರಿಲ್ ತಿಂಗಳಿನಿಂದ ಉಚಿತವಾಗಿ ಎಲ್ಲಾ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಪಡಿತರ ವಿತರಣೆ ಫ್ರಾರಂಭ ವಾಗಲಿದೆ. 2 ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದ್ದು, ಇದರಿಂದ ಬಡವರ್ಗದವರಿಗೆ ಸಹಾಯ ವಾಗಲಿದೆ.
ಇದಲ್ಲದೆ ಕೇಂದ್ರ ಸರ್ಕಾರ ಕಾರ್ಮಿಕರಿಗೆ, ನಿರ್ಗತಿಕರಿಗೆ, ವಲಸಿಗರಿಗೆ, ಬಿಕ್ಷುಕರಿಗೆ ಊಟ, ವಸತಿ, ವ್ಯವಸ್ಥೆ ಮಾಡಲು ಆಯಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳತ್ತಿದ್ದು, ಕೆಲವು ಸಂಘ ಸಂಸ್ಥೆಗಳು ಸಹಾಯ ಮಾಡುತ್ತಿದೆ.
ಒಟ್ಟಿನಲ್ಲಿ ಕೊರೋನಾ ವೈರಸ್ ಕಂಟಕದಿಂದ ಇಡೀ ದೇಶದಲ್ಲಿ ಆತಂಕ ಸೃಷ್ಟಿ ಯಾಗಿದ್ದು, ದೇಶದ ಆರ್ಥಿಕತೆ ಕುಸಿಯುತ್ತಿದೆ, ಈ ಪರಿಸ್ಥಿತಿ ಭಾರತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.