ಲಾಕ್ ಡೌನ್ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ನಿಮ್ಮ ಖಾತೆಗೆ ಜಮ ಮಾಡುವ ಮೂಲಕ ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೊಂದು ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್.14ರವರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿದ್ದಲ್ಲದೇ, 500 ಕೋಟಿ ವಿಶೇಷ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೂ ಎರಡು ಸಾವಿರ ರೂಪಾಯಿ ಆರ್ಥಿಕ ಪರಿಹಾರವನ್ನು ಘೋಷಿಸಿದ್ದರು. ಇಂತಹ ವಿಶೇಷ ಆರ್ಥಿಕ ಪ್ಯಾಕೇಜ್ ಹಣ, ಬೀದಿ ಬದಿಯ ವ್ಯಾಪಾರಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಆಗಲಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಬೀದಿ ಬೀದಿಗಳಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುವಂತಹ ವ್ಯಕ್ತಿಗಳಿಗೆ. ಕೋರೋನ ಸಮಯದಲ್ಲಿ ಅವರವರ ಜೀವನೋಪಾಯಕ್ಕಾಗಿ ಪ್ರತಿಯೊಬ್ಬರ ಖಾತೆಗೆ ಎರಡು ಸಾವಿರ ರೂಪಾಯಿ ಹಣವನ್ನು ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಹಾಗೂ ಅಷ್ಟೇ ಅಲ್ಲದೆ ಜೂನ್ ಎಂಟರಂದು ಈ ಯೋಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ, ಬೀದಿ ಬದಿಯ ವ್ಯಾಪಾರಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಹಣ ವರ್ಗಾವಣೆಗೆ ಚಾಲನೆ ನೀಡಿದ್ದಾರೆ. ಬೀದಿ ಬದಿ ವ್ಯಾಪಾರಿಗಳು, ಕೌಶಲ್ಯಾಭಿವೃದ್ಧಿ , ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಈ ಅಭಿಯಾನದಡಿ ನೊಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ -೧೯ ಇದರ ಎರಡನೇ ಅಲೆಯ ಪರಿಹಾರ ನಿಧಿಯನ್ನು ನೀಡುವ ತಲಾ ಎರಡೆರಡು ಸಾವಿರ ರೂಪಾಯಿ ಪ್ಯಾಕೆಜ್ ನೀಡುವ ಹಣವನ್ನು ನೇರವಾಗಿ ಆಯಾ ವ್ಯಕ್ತಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
ಇವರಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ ಬೀದಿ ವ್ಯಾಪಾರ ಕೈಗೊಳ್ಳುವ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದಾಗಿದೇ. ಅದರಂತೆಯೇ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುತ್ತಿದೆ. ಕೋವಿಡ್ -೧೯ ಇದರ ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೆ ಒಳಗಾದ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗೆ ಕೂಡಾ ಹತ್ತು ಸಾವಿರ ರೂಪಾಯಿಗಳ ವರೆಗೆ ಬ್ಯಾಂಕ್ ಮೂಲಕ ಕಿರು ಸಾಲ ಸೌಲಭ್ಯವನ್ನು ಒದಗಿಸಲಾಗಿತ್ತು. ಈ ಯೋಜನೆಯ ಅಡಿಯಲ್ಲಿ ಇದುವರೆಗೂ ಒಟ್ಟೂ ೧೦೭.೯೨ ಕೋಟಿಗಳಷ್ಟು ಸಾಲವನ್ನು ವಿತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈಗ ಕೋವಿಡ್ -೧೯ ಇದರ ಎರಡನೇ ಅಲೆ ಪ್ರಾರಂಭ ಆದಮೇಲೆ ಈ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೆ ಒಳಗಾದ ಬೀದಿ ಬದಿ ವ್ಯಾಪಾರಿಗಳಿಗೆ ದಿನಾಂಕ ೧೯ ಮೇ ಇಂದ ಸರ್ಕಾರದ ವಿಶೇಷ ಪ್ಯಾಕೆಜ್ ಅಡಿಯಲ್ಲಿ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗೆ ತಲಾ ಎರಡು ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತಿತ್ತು.
ಈ ಯೋಜನೆಯ ಅಡಿಯಲ್ಲಿ ೨,೧೬,೪೩೯ ಫಲಾನುಭವಿಗಳ ಆಧಾರ್ ಜೋಡಣೆ ಮಾಡಲಾಗಿದ್ದು ಇದುವರೆಗೆ ೧,೯೧,೬೮೪ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಡಿಟಿಪಿ ಮೂಲಕ ಹಣವನ್ನು ಜಮಾ ಮಾಡಲಾಗಿದೆ. ಇದಕ್ಕಾಗಿ ಒಟ್ಟೂ ಸಹಾಯಧನ ೩೮.೩೩ ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ. ಇನ್ನು ಉಳಿದ ಹಾಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೇ ಇರುವ ಬೀದಿ ಬದಿ ವ್ಯಾಪಾರಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ ಆದಷ್ಟು ಬೇಗ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಈ ಸಹಾಯ ಧನವನ್ನು ಪಡೆಯಲು ಈ ವ್ಯಾಪಾರಿಗಳು ಪ್ರತ್ಯೇಕವಾಗಿ ಯಾವುದೇ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಅಷ್ಟೇ ಅಲ್ಲದೆ ಈ ಪ್ಯಾಕೆಜ್ ನಲ್ಲಿ ಬಿಡುಗಡೆಯಾದ ಹಣವನ್ನು ಬೀದಿ ಬದಿ ವ್ಯಾಪಾರಿಗಳ ಬೇರೆ ಯಾವುದೇ ಸಾಲಕ್ಕೆ ಇದನ್ನು ಹೋಲಿಕೆ ಮಾಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬ್ಯಾಂಕ್ ಗಳಿಗೆ ನಿರ್ದೇಶನ ನೀಡಿದ್ದಾರೆ. ಈ ರೀತಿಯಾಗಿ ಯಾವ ವ್ಯಾಪಾರಿಗಳ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಜೋಡಣೆ ಆಗಿರುತ್ತದೆ ಅಂತಹ ವ್ಯಾಪಾರಿಗಳು ಈ ಯೋಜನೆಯ ಅಡಿಯಲ್ಲಿ ಎರಡು ಸಾವಿರ ರೂಪಾಯಿ ಸಹಾಯಧನವನ್ನು ಪಡೆದುಕೊಳ್ಳಬಹುದು.