ಪದವಿ B.ED, TET ಮುಗಿಸಿ ಶಿಕ್ಷಕರಾಗಲು ಕಾಯುತ್ತಿರೋರಿಗೆ ಗುಡ್ ನ್ಯೂಸ್

0 2

ಪದವಿ ಮುಗಿಸಿ B.Ed ವ್ಯಾಸಂಗ ಮಾಡಿ TET ಪಾಸ್‌ ಮಾಡಿ ಸರ್ಕಾರಿ ಶಿಕ್ಷಕ ಯಾವಾಗ ಆಗುತ್ತಿನೋ ಎಂದು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ರಾಜ್ಯದ ಲಕ್ಷಾಂತರ ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಇದೀಗ ಒಂದು ಸಿಹಿ ಸುದ್ಧಿ ಹೊರಬಿದ್ದಿದೆ. ಈ ವರ್ಷವೇ 5000 ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರದಿಂದ ಸೂ ಹನೆ ದೊರಕಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

 ಶಿಕ್ಷಕರ ದಿನದಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದಾದ್ಯಂತ ಶಿಕ್ಷಕರ ಕೊರತೆ ಇದೆ ಈ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಐದು ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಪದವಿ B.ED, TET ಮುಗಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಬೇಕೆಂಬ ಕನಸು ಹೊತ್ತು ಕುಳಿತವರಿಗೆ ರಾಜ್ಯದ ನೂತ ಸಿಎಂ ಬಸವರಾಜ ಬೊಮ್ಮಾಯಿ ರವರು ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. 2021-22ನೇ ಶೈಕ್ಷಣಿಕ ಸಾಲಿನಲ್ಲೇ 5000 ಶಿಕ್ಷಕರ ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮಾಡಿದ ಮನವಿಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿ ರವರು ಈ ಘೋಷಣೆ ಮಾಡಿದ್ದಾರೆ. ಇನ್ನೂ ಈ ಘೋಷಣೆಯ ನಂತರ ಕರ್ನಾಟಕ ರಾಜ್ಯದ 2021-22ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಪ್ರಕಟಿಸಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಅವರು ಅಭಿನಂದಿಸಿದ್ದಾರೆ. 2021-22ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ “ಮಾತೆ ಸಾವಿತ್ರಿಬಾಯಿ ಪುಲೆ” ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರದ ಆದೇಶ ಸಂಖ್ಯೆ : ಇಡಿ 442 ಪಿಬಿಎಸ್ 2018 ದಿನಾಂಕ 28-09-2018 ರಂತೆ ಅನುಮತಿ ನೀಡಲಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ 20 ಶಿಕ್ಷಕರ ಪೈಕಿ 7 ಶಿಕ್ಷಕರು ಕನ್ನಡ ವಿಷಯ ಬೋಧನೆ ಮಾಡುವ ಶಿಕ್ಷಕರೇ ಆಗಿದ್ದಾರೆ. ಉಳಿದಂತೆ ವಿಜ್ಞಾನ ಮತ್ತು ಹಿಂದಿ, ಇತರೆ ವಿಷಯಗಳು ಶಿಕ್ಷಕರು ಇದ್ದಾರೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.