Good news from the state government for the homeless: ರಾಜ್ಯದ ಜನತೆಗೆ ಸರ್ಕಾರ ಒಂದು ಸಿಹಿ ಸುದ್ದಿಯನ್ನು ನೀಡಿದೆ. ಸ್ವಂತ ಮನೆ (Owen House) ಇಲ್ಲದವರಿಗೆ ಮನೆ ಕಲ್ಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (CM Bommai) ಅವರು ಹೇಳಿದ್ದಾರೆ. ಈ ಯೋಜನೆಯ ಬಗ್ಗೆ ಸಾಮಾನ್ಯ ಜನರಿಗೆ ಮುಟ್ಟಿಸುವಂತಹ ಕೆಲಸವನ್ನು ಮಾಡಬೇಕು. ಆಗ ಈ ಯೋಜನೆ ಯಶಸ್ವಿಗೊಳ್ಳುತ್ತದೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದೋಗಿಸಲು ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬಡವರ ಹಿತಾಸಕ್ತಿ ದೃಷ್ಟಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಸರ್ಕಾರ ತಿಳಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ ಎರಡು ವರ್ಷಗಳ ಕೋವಿಡ್ ಸಂಕಷ್ಟಗಳ ನಡುವೆಯೂ 10,173 ಕೋಟಿ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ.
ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸಕ್ತ ವರ್ಷ 20,000 ಮನೆಗಳನ್ನ ಪೂರ್ಣಗೊಳಿಸಿದ್ದಾರಲ್ಲದೆ 5 ಲಕ್ಷ ಹೊಸ ಮನೆಗಳನ್ನ ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆ ಅಡಿ ಇಚ್ಛೆ ಪಡುವ ಮನೆಯನ್ನ ಆನ್ಲೈನ್ ನಲ್ಲಿ ಆಯ್ಕೆ ಮಾಡುವ ಫಲಾನುಭವಿಗಳೆ ಆಯ್ಕೆ ಮಾಡುವ ಪಾರದರ್ಶಕತೆಯನ್ನ ರೂಪಿಸಲಾಗಿದೆ
ಅಭಿವೃದ್ಧಿ ಆಕಾಂಕ್ಷೆ ತಾಲೂಕಿನಲ್ಲಿ ಎಲ್ಲಾ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಉದ್ದೇಶಕ್ಕೆ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ರೂಪಾಯಿ ಒದಗಿಸಲಾಗಿದ್ದು ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ..ಯಾವುದೇ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಇನ್ನುಮುಂದೆ ಈ ದಾಖಲೆ ಕಡ್ಡಾಯವಾಗಿ ಇರಬೇಕು
ಅತಿವೃಷ್ಟಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯನ್ನ ಪುನರ್ ನಿರ್ಮಾಣಕ್ಕೆ ನೀಡುವ ಸಹಾಯ ಧನವನ್ನು ಸರ್ಕಾರ 5ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು ಇದಕ್ಕೆ ಇಲ್ಲಿಯವರೆಗ 2627 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು ಎರಡು ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30,000 ಸ್ವತ್ತುಗಳನ್ನ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.