ಕರ್ನಾಟಕ ರಾಜ್ಯದ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯ ಧನ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ರೈತರು ಅರ್ಜಿ ಸಲ್ಲಿಸಿ ಸಹಾಯ ಧನ ಪಡೆಯಬಹುದಾಗಿದೆ.
ತೋಟಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯ್ ಯೋಜನೆ ಅಡಿಯಲ್ಲಿ ರೈತರಿಗೆ ತೋಟಗಾರಿಕಾ ಬೆಳೆಗಳಿಗಾಗಿ ಹನಿ ನೀರಾವರಿ ಪದ್ಧತಿ ಅಂದರೆ ಡ್ರಿಪ್ ಅನ್ನ ನಿಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಲು ಸಹಾಯ ಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ.
ಹಾಗಾದರೆ ಹನಿ ನೀರಾವರಿಯ ಸಹಾಯ ಧನವನ್ನು ಪಡೆಯಲು ಎಂತಹ ರೈತರು ಅರ್ಹರು ಎಂದರೆ 5 ಎಕರೆಕ್ಕಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ಜಾತಿವರ್ಗದ ರೈತರು ಸಹಾಯಧನ ಪದೆದುಕೊಳ್ಳಲು ಅರ್ಹರಾಗಿರುತ್ತಾರೆ.
ಒಂದು ವೇಳೆ 5 ಎಕರೆಕ್ಕಿಂತ ಅಧಿಕ ಜಮೀನು ಹೊಂದಿರುವ ರೈತರು ಕೇವಲ 5 ಎಕರೆವರೆಗೆ ಹನಿ ನೀರಾವರಿ ಪದ್ಧತಿಯನ್ನು ಜಮೀನಿನಲ್ಲಿ ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯ್ ಯೋಜನೆಯಡಿಯಲ್ಲಿ ಬಡ ಕುಟುಂಬದ ರೈತರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಪಡೆಯಲು ಆಸಕ್ತ ರೈತರು ನಿಮ್ಮ ಜಿಲ್ಲೆಯ ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು. ಅಥವಾ ನಿಮ್ಮ ಗ್ರಾಮಕ್ಕೆ ಒಳಪಡುವ ರೈತ ಸಂಪರ್ಕ ಕೇಂದ್ರವನ್ನು ಸಹ ಸಂಪರ್ಕಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಯೋಜನೆಗೆ ಬೇಕಾದ ದಾಖಲಾತಿಗಳೆಂದರೆ ಆಧಾರ್ ಕಾರ್ಡ್, ಬ್ಯಾಂಕಿನ ಪಾಸ್ ಬುಕ್, ಜಮೀನಿನ ಪಹಣಿ, ಹೋಲ್ಡಿಂಗ್ ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಎರಡು ಭಾವಚಿತ್ರಗಳು, ಈ ಎಲ್ಲಾ ದಾಖಲೆಗಳನ್ನು ಅರ್ಜಿಯ ಜೊತೆಗೆ ಲಗತ್ತಿಸಿ ಇದೇ ಮೇ ತಿಂಗಳಿನ 30 ನೇ ತಾರೀಖಿನ ಒಳಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು.