Govt Housing Scheme: ಸ್ವಂತ ಮನೆ ಇಲ್ಲದವರಿಗೆ ಬಂಪರ್ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು

0 429

Govt Housing Scheme: ಕರ್ನಾಟಕ ರಾಜ್ಯದಾದ್ಯಂತ ಸ್ವಂತ ಮನೆ ಇಲ್ಲದವರಿಗೆ ವಸತಿ ಸಚಿವರಾದ ಜಮೀರ್ ಅಹಮ್ಮದ್ ಅವರು ಭಾರಿ ದೊಡ್ಡ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಅದು ಏನು ಎಂದು ತಿಳಿದುಕೊಳ್ಳೋಣ ಬನ್ನಿ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಭಾರತವನ್ನು ಗುಡಿಸಲು ಮುಕ್ತ ಭಾರತ ನಿರ್ಮಾಣಕ್ಕೆ ಮಹತ್ವದ ಕ್ರಮವನ್ನು ತೆಗೆದುಕೊಂಡಿದೆ.

ರಾಜ್ಯದಲ್ಲಿ ಇನ್ನೂ ಕೂಡ ಇರಲು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಜನರು ಇದ್ದಾರೆ ಹಾಗೂ ಸ್ವಂತ ಜಾಗವೂ ಕೂಡ ಇಲ್ಲದೆ ಇರುವಷ್ಟು ನಿರಾಶ್ರಿತರಿದ್ದಾರೆ. ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಯ ಜನರು ಹಾಗೂ ನಗರಸಭೆ, ಪುರಸಭೆ ನಗರಪಾಲಿಕೆ ಸೇರಿದಂತೆ ನಗರ ಪಟ್ಟಣಗಳಲ್ಲಿ ವಾಸಿಸಲು ಸ್ವಂತ ಸೂರು ಇಲ್ಲದ ಬಡವರು ಕೂಡ ಇದ್ದಾರೆ.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಮತವನ್ನು ಪಡೆದುಕೊಳ್ಳುವ ಮೂಲಕ ಜಯ ಸಾಧಿಸಿದೆ. ಸದ್ಯದಲ್ಲೇ ವಸತಿ ಸಚಿವರಾದ ಜಮೀರ ಅಹಮ್ಮದ್ ಅವರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಲ್ಲಾ ಬಡ ಕುಟುಂಬಗಳಿಗೆ, ನಗರ ಮತ್ತು ಗ್ರಾಮೀಣ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ.

Govt Housing Scheme 2023

ಕಾಲ ಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ತೀರ್ಮಾನಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಿದ್ದಾರೆ ಮತ್ತು ವಸತಿ ಇಲಾಖೆಯ ಗೃಹ ಮಂಡಳಿ, ಕೊಳಗೇರಿ ಅಭಿವೃದ್ಧಿ ಮಂಡಳಿ ರಾಜ್ಯ ಖಾತೆ ವಸತಿ ನಿಗಮದಿಂದ ಪ್ರತಿಕ್ಷೇತ್ರದಲ್ಲಿ ಅನುಷ್ಠಾನಗೊಳಿಸಿರುವ ವಸತಿ ಯೋಜನೆಗಳ ಬಗ್ಗೆ ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಕಾಲ ಮಿತಿ ಒಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರ ಮಾಡುವಂತೆ ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಪ್ರತಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವಾರು ಹಂಚಿಕೆಯಾದ ಮನೆ ಮತ್ತು ಬಾಕಿ ಉಳಿದ ಮನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಗ್ರಾಮ ಸಭೆಯ ಮೂಲಕ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಲು ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಈ ತಿಂಗಳ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ ಕುಂಭ ರಾಶಿಯವರ ಪಾಲಿಗೆ ಈ ಆಗಸ್ಟ್ ತಿಂಗಳು ಹೇಗಿರತ್ತೆ ನೋಡಿ

Leave A Reply

Your email address will not be published.