Govt jobs Ballary Court: ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಇದೀಗ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಬಳ್ಳಾರಿಯ ಕೋರ್ಟ್ ನಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಈಗ ಆದೇಶ ನೀಡಿದೆ. ಈ ಹುದ್ದೆಯ ಬಗ್ಗೆ ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಕೂಡ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುದ್ದೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ..

ಹುದ್ದೆ ಖಾಲಿ ಇರುವುದು ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ, ಖಾಲಿ ಇರುವುದು ಪ್ಯೂನ್ ಹುದ್ದೆ, ಒಟ್ಟು 31 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 4/12/2023 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದ್ದು, 1/1/2024 ಅರ್ಜಿ ಸಲ್ಲಿಸಲು ಇದು ಕೊನೆಯ ದಿನಾಂಕ ಆಗಿದೆ. ಈ ಕೆಲಸಕ್ಕೆ ಅಗತ್ಯವಿರುವ ವಿದ್ಯಾರ್ಹತೆ, ಆಸಕ್ತರು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆ ಇಂದ 10ನೇ ತರಗತಿ ಪಾಸ್ ಆಗಿರಬೇಕು.

ಈ ಕೆಲಸದ ವಯೋಮಿತಿ ನೋಡುವುದಾದರೆ, ಕನಿಷ್ಠ ವಯಸ್ಸು 18, ಗರಿಷ್ಠ ವಯಸ್ಸು 35 ಆಗಿದ್ದು, ವಯೋಮಿತಿ ಸಡಿಲಿಕೆ ಇದ್ದು, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಆಯ್ಕೆಯಾಗುವ ಅಭ್ಯರ್ಥಿಯನ್ನು ಇಂಟರ್ವ್ಯೂ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಕೆಲಸಕ್ಕೆ ಸಿಗಬಹುದಾದ ವೇತನವನ್ನು ನ್ಯಾಯಾಲಯವು ನಿಯಮಗಳ ಅನುಸಾರ ನಿಗದಿ ಮಾಡುತ್ತದೆ. ಇನ್ನು ಅರ್ಜಿ ಶುಲ್ಕದ ಬಗ್ಗೆ ಹೇಳುವುದಾದರೆ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

https://ballari.dcourts.gov.in/ ಈ ಲಿಂಕ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗೆ ಅಪ್ಲೈ ಮಾಡಬಹುದು. ಇಲ್ಲಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ನೀವು ಸರಿಯಾಗಿ ಉತ್ತರಿಸಿ, ಕೇಳುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ. ಬಳಿಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಈಗ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಬೇಕು.

Leave a Reply

Your email address will not be published. Required fields are marked *