ಗ್ರಾಮ ಪಂಚಾಯ್ತಿಯ ಗ್ರಂಥಾಲಯದಲ್ಲಿ ಮೇಲ್ವೀಚಾರಕ ಹುದ್ದೆಗಳು ಖಾಲಿಯಿವೆ, ಇವತ್ತೆ ಅರ್ಜಿಹಾಕಿ

0 1

ಈಗಿನ ದಿನಗಳಲ್ಲಿ ನಮಗೆ ಬೇಕಾದ ಉದ್ಯೋಗ ಪಡೆಯುವುದು ಕಷ್ಟವಾಗಿದೆ. ಕೆಲವರು ಸರ್ಕಾರದ ಕೆಲಸವನ್ನು ಪಡೆಯಬೇಕು ಎಂದು ಕಾಯುತ್ತಿರುತ್ತಾರೆ. ಇದೀಗ ದಾವಣಗೆರೆ ಜಿಲ್ಲೆಯ ಜನರಿಗೆ ಸಿಹಿಸುದ್ದಿಯೊಂದಿದೆ. ಅದೇನೆಂದು ಈ ಲೇಖನದ ಮೂಲಕ ತಿಳಿಯೋಣ ಉದ್ಯೋಗ ಸಿಗದಿರುವವರಿಗೆ ಸಹಾಯ ಮಾಡೋಣ.

ದಾವಣಗೆರೆ ಜಿಲ್ಲೆಯ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಮೇಲ್ವೀಚಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಬರುವ ಬೇತೂರು ಹಾಗೂ ಜಗಳೂರು ತಾಲ್ಲೂಕಿನಲ್ಲಿ ಬರುವ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ದಾವಣಗೆರೆ ತಾಲ್ಲೂಕಿನ ಬೇತೂರು-2 (ಮಹಿಳೆಯಾಗಿರಬೇಕು), ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ, ಸಾಮಾನ್ಯ ಗ್ರಾಮೀಣ ಅಭ್ಯರ್ಥಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ ಎಸ್ಎಸ್ಎಲ್ ಸಿಯಲ್ಲಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದವರಾಗಿರಬೇಕು ಜೊತೆಗೆ ಈ ಕುರಿತು ತಹಶೀಲ್ದಾರ್ ರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಹಾಗೂ ಸ್ಥಳೀಯ ಮತದಾರರ ಪಟ್ಟಿಯ ಭಾಗದ ಪ್ರತಿಯನ್ನು ಸಲ್ಲಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ, ಉಪಪ್ರೇರಕ ಅಥವಾ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸೇವಾ ಪ್ರಮಾಣಪತ್ರ ಸಲ್ಲಿಸಿದಲ್ಲಿ ಆದ್ಯತೆ ನೀಡಲಾಗುವುದು ಅಲ್ಲದೆ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ಸೇವಾ ಪ್ರಮಾಣ ಪತ್ರ ಅಥವಾ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆಯದ ಅಭ್ಯರ್ಥಿಗಳು ಇಲ್ಲದಿದ್ದಲ್ಲಿ ಎಸ್ಎಸ್ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಪಿಡಿಒಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್ಎಸ್ಎಲ್ ಸಿ ಅಂಕಪಟ್ಟಿ, ಮೀಸಲಾತಿ ಪ್ರಮಾಣ ಪತ್ರ, ರಹವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಯನ್ನು ಲಗತ್ತಿಸಿ, ಆಯಾ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಅಥವಾ ಪಿಡಿಒಗೆ ಸಲ್ಲಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 14 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12 ಸಾವಿರ ರೂಪಾಯಿ ಗೌರವ ಸಂಭಾವನೆಯನ್ನು ನಿಗದಿ ಮಾಡಲಾಗಿದೆ. ಮೀಸಲಾತಿಗನುಸಾರವಾಗಿ ನೇಮಕಾತಿ ಮಾಡಲಾಗುತ್ತದೆ. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಎಸ್ ಬಿಎಂ ಕಟ್ಟಡ, ನಿಟ್ಟುವಳ್ಳಿ ಹೊಸ ಬಡಾವಣೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು. 8722313666 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಉದ್ಯೋಗಕ್ಕಾಗಿ ಹುಡುಕುವವರು ಈ ಮಾಹಿತಿಯ ಪ್ರಯೋಜನವನ್ನು ಪಡೆಯಿರಿ.

Leave A Reply

Your email address will not be published.