ರೇಷನ್ ಕಾರ್ಡ್ ಇದ್ದೋರಿಗೆ ಗ್ರಾಮ ಪಂಚಾಯ್ತಿಯಲ್ಲಿ ಯಾವೆಲ್ಲ ಸಬ್ಸಿಡಿ ಇವೆ ನೋಡಿ..

0 9,852

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಬೆಳವಣಿಗೆಗೆ ಸಹಾಯಕವಾಗಿದೆ. ಈ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಎಪಿಎಲ್ ಮತ್ತು ಬಿಪಿಎಲ್ ಕಾರ್ಡನ್ನು ಹೊಂದಿರುವ ರೈತರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಅದೇನೆಂಬುದನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ.

ಕೇಂದ್ರ ಸರ್ಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನೇಕ ಅನುದಾನಗಳನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಎಪಿಎಲ್ ಮತ್ತು ಬಿಪಿಎಲ್ ಕಾರ್ಡನ್ನು ಹೊಂದಿರುವ ಕುಟುಂಬಗಳಿಗೆ ನೀಡುತ್ತಿದೆ. ಹಾಗಾದರೆ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಎಷ್ಟು ಅನುದಾನವನ್ನು ಯಾವ ಯಾವ ಯೋಜನೆಗಳಿಗೆ ಬಿಡುಗಡೆ ಮಾಡಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮತ್ತು ಎಪಿಎಲ್ ಮತ್ತು ಬಿಪಿಎಲ್ ಕಾರ್ಡನ್ನು ಹೊಂದಿರುವ ಕುಟುಂಬಗಳಿಗೆ ಇದರಿಂದ ಹೇಗೆ ಸಹಾಯ ಆಗುತ್ತದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಎಪಿಎಲ್ ಮತ್ತು ಬಿಪಿಎಲ್ ಕಾರ್ಡನ್ನು ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುದಾನವನ್ನು ನೀಡುತ್ತಿದೆ. ದನದ ಕೊಟ್ಟಿಗೆ ನಿರ್ಮಾಣಕ್ಕೆ ಮೂವತ್ತೆರಡು ಸಾವಿರ ರೂಪಾಯಿಯನ್ನು, ಕೊಳವೆ ಬಾವಿ ಮರುಪೂರಣಕ್ಕೆ ಇಪ್ಪತ್ತು ಸಾವಿರ ರೂಪಾಯಿಯನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀಡುತ್ತಿದೆ.

ಬಾವಿಯನ್ನು ಕೊರೆಯಿಸಲು ಒಂದು.ಇಪ್ಪತ್ತೆಂಟು ಲಕ್ಷ ರೂಪಾಯಿಯನ್ನು ಕೃಷಿ ಭೂಮಿ ಸಮತಟ್ಟು ಮಾಡಲು ಒಂದು ಎಕರೆಗೆ ಹದಿಮೂರು ಸಾವಿರ ರೂಪಾಯಿಯನ್ನು ನೀಡುತ್ತಿದೆ. ಇಂಗು ಗುಂಡಿ ನಿರ್ಮಾಣಕ್ಕಾಗಿ ಮಾದರಿ ಒಂದಕ್ಕೆ ಐವತ್ತು ಸಾವಿರ ರೂಪಾಯಿ ಹಾಗೂ ಮಾದರಿ ಎರಡಕ್ಕೆ ಮೂವತ್ಮೂರು ಸಾವಿರ ರೂಪಾಯಿಯನ್ನು ಇಂಗು ಗುಂಡಿ ನಿರ್ಮಾಣಕ್ಕಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀಡುತ್ತಿದೆ.

ವಸತಿ ಯೋಜನೆ ಫಲಾನುಭವಿಗಳಿಗೆ ಒಂದು ಮನೆಗೆ ಇಪ್ಪತ್ನಾಲ್ಕು ಸಾವಿರದ ಏಳುನೂರಾ ಐವತ್ತು ರುಪಾಯಿ ಅನುದಾನವನ್ನು ನೀಡುತ್ತಿದೆ ಅದೇ ರೀತಿ ಬದು ನಿರ್ಮಾಣ ಕಾಂಪೋಸ್ಟ್ ಗುಂಡಿ ಕೆರೆ ನಿರ್ಮಾಣ ಹಿಪ್ಪುನೇರಳೆ ತೋಟದ ನಿರ್ವಹಣೆ ಸಸಿ ನೆಡುವುದು ಶೌಚಾಲಯ ನಿರ್ಮಾಣ ಅಡಿಕೆ ತೋಟ ನಿರ್ವಹಣೆ ತೆಂಗು ಗೇರು ಕರಿಮೆಣಸು ಬಾಳೆ ಮುಂತಾದವುಗಳಿಗೆ ಈ ಯೋಜನೆಯಡಿ ಅನುದಾನವನ್ನು ನೀಡಲಾಗುತ್ತದೆ. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ ಸಣ್ಣ ಮತ್ತು ಅತಿ ಸಣ್ಣ ರೈತರು ಎಪಿಎಲ್ ಮತ್ತು ಬಿಪಿಎಲ್ ಕಾರ್ಡನ್ನು ಹೊಂದಿರುವ ಕುಟುಂಬದವರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಪಡೆಯಲು ಅವಕಾಶವಿದ್ದು ಇವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸ ಬಹುದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಈ ಎಲ್ಲಾ ಕಾರ್ಯಗಳಿಗೆ ಕೇಂದ್ರ ಸರ್ಕಾರವು ಅನುದಾನವನ್ನು ನೀಡುತ್ತಿರುವುದು ಸಂತಸದ ವಿಷಯವಾಗಿದೆ. ಈ ಅನುದಾನ ಯೋಜನೆ ಮೂಲಕ ರೈತರಿಗೆ ಅಭಿವೃದ್ದಿಯ ಕೆಲಸಗಳನ್ನು ಮಾಡಲು ತುಂಬಾ ಸಹಾಯಕವಾಗುತ್ತದೆ.

Leave A Reply

Your email address will not be published.