Ultimate magazine theme for WordPress.

10ನೇ ತರಗತಿ ಪಾಸಾದವರಿಗೆ ಗ್ರಂಥಾಲಯ ಇಲಾಖೆಯಲ್ಲಿ ಉದ್ಯೋಗಾವಕಾಶ

0 2

ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು 01. ಉದ್ಯೋಗ ಸ್ಥಳ ವಿಜಯಪುರ.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆಹನ್ನು ಪೂರೈಸಿರಬೇಕು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು.

ಸಾಮಾನ್ಯ ವರ್ಗ  35 ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಪ್ರ ವರ್ಗ -1
ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಟ ವಯೋಮಿತಿಗಳನ್ನು ಮೀರಿರಬಾರದು.

ಆಯ್ಕೆ ವಿಧಾನ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಬೇಕಾದ ಕಛೇರಿ ವಿಳಾಸ : ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :29 ಡಿಸೆಂಬರ್ 2021.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :24 ಜನವರಿ 2022.

Leave A Reply

Your email address will not be published.