ಎಲ್ಲರಿಗೂ ಯಾವುದಾದರೂ ಒಂದು ಉದ್ಯೋಗವನ್ನು ಮಾಡಬೇಕು ಎಂಬ ಆಸೆ ಇರುತ್ತದೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವ ಬದಲು ಏನಾದರು ಉದ್ಯೋಗವನ್ನು ಮಾಡಿಕೊಂಡರೆ ಜೀವನವನ್ನು ನಡೆಸುವುದಕ್ಕೆ ಸುಲಭವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಯಾವುದಾದರೂ ಉದ್ಯೋಗವನ್ನು ಹುಡುಕುತ್ತಿರುತ್ತಾರೆ ಅಂತಹ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವಿಂದು ಎರಡು ಇಲಾಖೆಯಲ್ಲಿ ನಡೆಯುವ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ.

ಯಾವ ಯಾವ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಷ್ಟು ಹುದ್ದೆಗಳು ಖಾಲಿ ಇವೆ ಅರ್ಜಿಯನ್ನು ಸಲ್ಲಿಸುವುದಕ್ಕೆ ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಈ ಎಲ್ಲದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.

ಮೊದಲನೆಯದಾಗಿ ನಾವು ನಿಮಗೆ ತಿಳಿಸುತ್ತಿರುವ ನೇಮಕಾತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ ಇಪ್ಪತ್ತೈದು ಎರಡು ಸಾವಿರದ ಇಪ್ಪತ್ತೊಂದು ಕೊನೆಯ ದಿನಾಂಕವಾಗಿದೆ. ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಟಿಸಿ ಮೀಸಲಾತಿ ಪ್ರಮಾಣ ಪತ್ರ ಸ್ಥಳೀಯವಾಗಿ ದೃಢೀಕರಣ ಪತ್ರ ಅಂಗವಿಕಲತೆ ಇದ್ದಲ್ಲಿ ಹಾಗೂ ಇನ್ನಿತರ ವಿದ್ಯಾರ್ಹತೆ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಸಲ್ಲಿಸಬೇಕು.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಅಭ್ಯರ್ಥಿಯು ಎಸೆಸೆಲ್ಸಿ ಉತ್ತೀರ್ಣ ವಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹದಿನೆಂಟು ವರ್ಷದಿಂದ ಮೂವತ್ತೆಂಟು ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬುದನ್ನು ತಿಳಿಯುವುದಾದರೆ ನೀವು ಅರ್ಜಿಯನ್ನು ಗ್ರಾಮ ಪಂಚಾಯತ ಸೆಕ್ರೆಟರಿ ಚಿಕ್ಕಬಸೂರು ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಕರ್ನಾಟಕ ಸರ್ಕಾರದಿಂದ ಲೈಬ್ರರಿ ಮೇಲ್ವಿಚಾರಕ ಹುದ್ದೆಯ ನೇಮಕಾತಿ ಎರಡು ಸಾವಿರದ ಇಪ್ಪತ್ತೊಂದರ ಅಡಿಯಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಸುರು ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಗ್ರಂಥಪಾಲಕ ಮತ್ತು ಮಾಹಿತಿ ಸಹಾಯಕ ಹುದ್ದೆಯ ಗೌರವ ಸಂಭಾವನೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಒಂದು. ಎಸ್ ಎಸ್ ಎಲ್ ಸಿ ಆಗಿರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಯಲ್ಲಿ ಈಗಾಗಲೇ ಅನುಭವವಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಈ ಒಂದು ಹುದ್ದೆಗೆ ಹಾವೇರಿ ಜಿಲ್ಲೆಯವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು ಬೇರೆ ಊರಿನವರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಇದಿಷ್ಟು ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಕುರಿತಾದಂತಹ ಮಾಹಿತಿ.

ಎರಡನೆಯದಾಗಿ ನಾವು ನಿಮಗೆ ತಿಳಿಸುತ್ತಿರುವ ಉದ್ಯೋಗ ಮಾಹಿತಿ ಆರ್ ಆರ್ ಸಿ ಹುಬ್ಬಳ್ಳಿ ನೇಮಕಾತಿ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವವರು ನಾಲ್ಕು ಅಕ್ಟೋಬರ್ ಎರಡು ಸಾವಿರದ ಇಪ್ಪತ್ತೊಂದರಿಂದ ಮೂರು ನವೆಂಬರ್ ಎರಡು ಸಾವಿರದ ಇಪ್ಪತ್ತೊಂದರ ವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಖಾಲಿ ಇರುವ ಹುದ್ದೆಗಳ ಸಂಖ್ಯೆ ಒಬ್ಬೈನೂರಾ ನಾಲ್ಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಎಷ್ಟಿರುತ್ತದೆ ಎನ್ನುವುದನ್ನು ನೋಡುವುದಾದರೆ ಎಸ್ಸಿ ಎಸ್ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಹಾಗೂ ಇತರ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಇನ್ನು ಯಾವ ಯಾವ ಸ್ಥಳದಲ್ಲಿ ಉದ್ಯೋಗವಕಾಶ ಇದೆ ಎಂಬುದನ್ನು ನೋಡುವುದಾದರೆ ಹುಬ್ಬಳ್ಳಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಉದ್ಯೋಗಕ್ಕೆ ಅವಕಾಶವಿದೆ. ಈ ಒಂದು ಹುದ್ದೆಗೆ ಹತ್ತನೇ ತರಗತಿ ಮತ್ತು ಎನ್ ಟಿ ಸಿ ಆಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆರ್ ಆರ್ ಸಿ ಯಡಿಯಲ್ಲಿ ಯಾವ ಯಾವ ಹುದ್ದೆಗಳಿಗೆ ಎಷ್ಟು ನೇಮಕಾತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿಯನ್ನು ನೋಡುವುದಾದರೆ ಪಿಟ್ಟರ್ ಮುನ್ನೂರ ತೊಂಬತ್ತು ಹುದ್ದೆಗಳು ವೆಲ್ಡರ್ ಐವತ್ತೈದು ಹುದ್ದೆಗಳು ಎಲೆಕ್ಟ್ರಿಷಿಯನ್ ಎರಡು ನೂರ ನಲವತ್ತೆಂಟು ಹುದ್ದೆಗಳು ಮೆಕ್ಯಾನಿಕ್ ಹದಿನಾರು ಹುದ್ದೆಗಳು ಪ್ರೋಗ್ರಾಮಿಂಗ್ ಅಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ನೂರಾಮುವತ್ತೆಂಟು ಹುದ್ದೆಗಳು ಮಷೀನಿಸ್ಟ್ ಹದಿಮೂರು ಹುದ್ದೆಗಳು ಟರ್ನರ್ ಹದಿಮೂರು ಉದ್ದೆಗಳು ಕಾರ್ಪೆಂಟರ್ ಹನ್ನೊಂದು ಹುದ್ದೆಗಳು ಪೇಂಟರ್ ಹದಿನೆಂಟು ಹುದ್ದೆಗಳು ಸ್ಟೆನೋಗ್ರಾಫರ್ ಎರಡು ಹುದ್ದೆಗಳು ಈ ರೀತಿಯಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ.

ನೋಡಿದಿರಲ್ಲ ಸ್ನೇಹಿತರೇ ಈ ರೀತಿಯಾಗಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಮತ್ತು ಆರ್ ಆರ್ ಸಿ ಯಲ್ಲಿ ನೇಮಕಾತಿ ನಡೆಯುತ್ತಿದ್ದು ನೀವು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಅಥವಾ ಪರಿಚಿತರು ಯಾರಾದರೂ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರೆ ಅವರಿಗೂ ಕೂಡ ಈ ಮಾಹಿತಿಯನ್ನು ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *