ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ವಯೋಮಿತಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಇನ್ನಿತರ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.

ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ನೇಮಕಾತಿ ಅಧಿಸೂಚನೆಯಲ್ಲಿ ಎಸ್ ಎಸ್ ಎಲ್ ಸಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಲಾಗಿದೆ. ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಯ ನಿಗದಿತ ದಿನಾಂಕಕ್ಕೆ 18 ವರ್ಷ ವಯಸ್ಸಾಗಿರಬೇಕು.

ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೆ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಕೆಲಸಮಾಡಬೇಕಾದ ಸ್ಥಳಗಳೆಂದರೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ಗ್ರಂಥಾಲಯ, ಮುಧೋಳ ತಾಲೂಕಿನ ಲೋಕಾಪುರ ಪಟ್ಟಣ ಪಂಚಾಯತಿ ಗ್ರಂಥಾಲಯ, ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮ ಪಂಚಾಯತಿ ಗ್ರಂಥಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮ ಪಂಚಾಯತಿ ಗ್ರಂಥಾಲಯ, ಕಂಬಳಿಪುರ ಗ್ರಾಮ ಪಂಚಾಯತಿ ಗ್ರಂಥಾಲಯ, ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಹುದ್ದೆಗಳು ಖಾಲಿ ಇವೆ.

ಅಭ್ಯರ್ಥಿಗಳು ಕೆಲವು ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಎಸ್ಎಸ್ಎಲ್ ಸಿ ಮಾರ್ಕ್ಸ್ ಕಾರ್ಡ್, ಮೀಸಲಾತಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ ಬೇಕಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 30ರೊಳಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಏಪ್ರಿಲ್ 6 ರೊಳಗೆ ಅರ್ಜಿ ಸಲ್ಲಿಸಬೇಕು. ಈ ಮಾಹಿತಿಯನ್ನು ತಪ್ಪದೆ ಎಸ್ಎಸ್ಎಲ್ ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ತಿಳಿಸಿ.

Leave a Reply

Your email address will not be published. Required fields are marked *