ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಎಲ್ಲಾ ಮಹಿಳೆಯರಿಗೆ ಹಣಕಾಸಿನ ಸಹಾಯ ಮಾಡುವುದಕ್ಕಾಗಿ ಜಾರಿಗೆ ತರಲಾಗಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆ ಲಾಂಚ್ ಆಯಿತು, ಈವರೆಗೂ ಸುಮಾರು 5 ತಿಂಗಳು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ.
ಈವರೆಗೂ ಸುಮಾರು 1.21 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಅವರುಗಳ ಪೈಕಿ 1.12 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಲಿದೆ. ಆದರೆ ಇನ್ನೂ ಕೂಡ 8.20 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಕ್ಕಿಲ್ಲ ಎಂದು ಮೂಲಗಳ ಪ್ರಕಾರ ತಿಳಿದುಬಂದಿದ್ದು, ಅದಕ್ಕೆ ಕಾರಣ ಏನು ಎನ್ನುವುದು ಕೂಡ ಗೊತ್ತಾಗಿದೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಹಿಳೆಯರ ಬ್ಯಾಂಕ್ ಖಾತೆಯ ಮಾಹಿತಿ ಸರಿಯಾಗಿ ಕೊಡದೇ ಇದ್ದರೆ, ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೇ ಇದ್ದರೆ, ರೇಷನ್ ಕಾರ್ಡ್ ನಲ್ಲಿ ತಪ್ಪು ಇದ್ದರೆ, ರೇಷನ್ ಕಾರ್ಡ್ ನಲ್ಲಿ ಮನೆಯ ಮುಖ್ಯಸ್ಥೆಯ ಸ್ಥಾನದಲ್ಲಿ ಮಹಿಳೆಯ ಹೆಸರು ಇಲ್ಲದೇ ಇದ್ದರೆ, ಆಧಾರ್ ಸೀಡಿಂಗ್ ಆಗಿಲ್ಲದೇ ಇದ್ದರೆ .. ಈ ಥರದ ಕಾರಣಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಬಂದಿಲ್ಲ ಎಂದು ತಿಳಿದುಬಂದಿದೆ.
ಈ ಸಮಸ್ಯೆಗಳನ್ನು ಸರಿಪಡಿಸಿಕೊಂಡರೆ, ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿ ಬರುತ್ತದೆ. ರೇಷನ್ ಕಾರ್ಡ್ ನಲ್ಲಿ ಸಮಸ್ಯೆ ಇದ್ದು, ಅದನ್ನು ಸರಿಪಡಿಸಿಕೊಂಡು, ಮನೆಯ ಮುಖ್ಯಸ್ಥೆಯ ಸ್ಥಾನದಲ್ಲಿ ಮಹಿಳೆಯ ಹೆಸರನ್ನು ತಿದ್ದುಪಡಿ ಮಾಡಿಕೊಂಡರೆ, ಅಂಥವರು ಮತ್ತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗ ಈ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ.