Gruhalakshmi And Anna bhagya Money: ಇವರಿಗೆಲ್ಲಾ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಿಗಲ್ಲ, ರದ್ದಾಗಿರುವವರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ಯಾ ಎಂದು ಚೆಕ್ ಮಾಡಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ನಮ್ಮ ರಾಜ್ಯ ಸರ್ಕಾರವು ಜನರಿಗಾಗಿ ತಂದಿರುವ ಪ್ರಮುಖವಾದ ಯೋಜನೆಗಳಾಗಿವೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ₹2000 ಆರ್ಥಿಕ ಪ್ರಯೋಜನ ನೀಡಿದರೆ, ಅನ್ನಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲರಿಗೂ 10ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, 10 ಕೆಜಿ ಅಕ್ಕಿ ಹೊಂದಿಸಲು ಸಾಧ್ಯವಾಗದೆ, 5ಕೆಜಿ ಅಕ್ಕಿ ಜೊತೆಗೆ ಇನ್ನು 5 ಕೆಜಿ ಅಕ್ಕಿಯ ಬದಲು ಹಣ ಒದಗಿಸುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ವಿಚಾರದಲ್ಲಿ ಇನ್ನು 20% ಮಹಿಳೆಯರಿಗೆ ಯೋಜನೆಯ ಹಣ ಬಂದಿಲ್ಲ. ಇದಕ್ಕೆ ಕಾರಣ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗದೆ ಇರುವುದು ಅಥವಾ ರೇಷನ್ ಕಾರ್ಡ್ ಮಾಹಿತಿ ತಪ್ಪಾಗಿರುವುದು ಇರಬಹುದು. ಈ ಕಾರಣಕ್ಕೆ ಮಹಿಳೆಯರಿಗೆ ಹಣ ಬಂದಿಲ್ಲ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಾಗೂ ಇನ್ನೆಲ್ಲಾ ಸಚಿವರ ಸಮ್ಮುಖದಲ್ಲಿ ಗೃಹಲಕ್ಷ್ಮಿ ಪ್ರಗತಿ ಸಭೆ ನಡೆಸಿದ್ದು, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಗೃಹಲಕ್ಷ್ಮಿ ಆಧಾಲತ್ ಶುರು ಮಾಡಲಾಗಿದ್ದು, ಮಹಿಳೆಯರಿಗೆ ಸಮಸ್ಯೆ ಇದ್ದರೆ ಅದನ್ನು ಗೃಹಲಕ್ಷ್ಮಿ ಅದಾಲತ್ ನಲ್ಲಿ ಅಧಿಕಾರಿಗಳಿಗೆ ತಿಳಿಸಬಹುದು. ಅಧಿಕಾರಿಗಳು ಆಗ ನಿಮ್ಮ ಮನೆಗೆ ಬಂದು, ನಿಮ್ಮ ಸಮಸ್ಯೆಯನ್ನು ತಿಳಿದುಕೊಂಡು ಅದನ್ನು ಸರಿಪಡಿಸಿ, ನಿಮಗೆ ಹಣ ಬರುವ ಹಾಗೆ ಮಾಡುತ್ತಾರೆ. ಹಾಗೆಯೇ ಸರ್ಕಾರಕ್ಕೆ ಮೋಸ ಮಾಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವುದಕ್ಕೆ ಕೂಡ ಸೂಚನೆ ನೀಡಲಾಗಿದೆ.

ಈ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.. “ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ..” ಎಂದು ಟ್ವೀಟ್ ಮಾಡಲಾಗಿದೆ.

ಹಾಗೆಯೇ ರದ್ದಾಗಿರುವವರ ಪಟ್ಟಿಯನ್ನು ಕೂಡ ಮಾಡಲಾಗಿದ್ದು, ಅದನ್ನು ಚೆಕ್ ಮಾಡುವುದು ಹೇಗೆ ಎಂದು ನೋಡೋಣ..
ಮೊದಲಿಗೆ ಈ https://ahara.kar.nic.in/Home/EServices ಲಿಂಕ್ ಗೆ ಭೇಟಿ ನೀಡಿ ಇಲ್ಲಿ 3 ಲೈನ್ ಗಳ ಮೇಲೆ ಕ್ಲಿಕ್ ಮಾಡಿ ಇಲ್ಲಿ ERation Card ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ, ಇದರಲ್ಲಿ Show Cancelled/Suspended ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ ಈಗ ಬರುವ ಲಿಸ್ಟ್ ನಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮದ ಮಾಹಿತಿ ತಿಳಿಸಿ
*ಈಗ ಅನರ್ಹರ ಪಟ್ಟಿ ಬರುತ್ತದೆ, ಹೆಸರಿನ ಜೊತೆಗೆ ರಿಜೆಕ್ಟ್ ಆಗಿರುವುದಕ್ಕೆ ಕಾರಣ ಕೂಡ ನೀಡಲಾಗಿರುತ್ತದೆ.

By

Leave a Reply

Your email address will not be published. Required fields are marked *