Gruhalakshmi Installment: ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಕೆಲವು ತಿಂಗಳುಗಳಿಂದ ಅನುಕೂಲ ಮಾಡಿಕೊಡುತ್ತಿದೆ. ಇದೀಗ ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ಸಾವಿರ ರೂಪಾಯಿಯನ್ನು ನೀಡಲಾಗುತ್ತಿದೆ. ಇದೀಗ ಮಹಿಳೆಯರಿಗೆ 11 ಮತ್ತು 12 ತಿಂಗಳಿನ ಹಣ ಪಾವತಿಯಾಗಬೇಕಾಗಿದೆ.
ಬಹಳಷ್ಟು ಜನರು ಗೃಹಲಕ್ಷ್ಮಿ ಯೋಜನೆಯ ಹಣ ಬರೋದಿಲ್ಲ ನಿಂತೋಗಿದೆ ಎಂಬುದಾಗಿ ಅಂದುಕೊಂಡಿದ್ದಾರೆ, ಇನ್ನೂ ಕೆಲವರು ಇವತ್ತು ನಾಳೆ ಬರುತ್ತೆ ಅನ್ನೋದನ್ನ ಕಾಯುತ್ತಿದ್ದಾರೆ. ಈ ನಡುವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಪಾವತಿಗೆ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ.
ಹೌದು ಸಚಿವೆ ಲಕ್ಷ್ಮೀ ಹೆಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಂತಸದ ಸುದ್ದಿ ತಿಳಿಸಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲಿಯೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಶೇ.98 ರಷ್ಟು ಮಹಿಳೆಯರು ಹೆಸರು ನೋಂದಾಯಿಸಿಕೊಂಡಿದ್ದು, ಅವರಿಗೆ ಇಲ್ಲಿಯವರೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ ಇನ್ನೂ ಉಳಿದ ಕಂತಿನ ಹಣ ಕೂಡ ಪಾವತಿ ಆಗುತ್ತೆ ಅನ್ನೋದನ್ನ ತಿಳಿಸಿದ್ದಾರೆ.