Gruhalakshmi money Date Fix: ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಮದುವೆಯಾಗಿ ಮನೆ ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ( Gruhalakshmi) ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಉದ್ದೇಶ ಇದಾಗಿದ್ದು, ಈಗಾಗಲೇ ಸುಮಾರು 1.15ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ.
2ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಎಲ್ಲಾ ಮಹಿಳೆಯರು ಕಾದು ಕುಳಿತಿದ್ದಾರೆ. ಸರ್ಕಾರದಿಂದ ಸಿಕ್ಕಿರುವ ಮಾಹಿತಿಯ ಅನುಸಾರ, ಶೀಘ್ರದಲ್ಲೇ ಎರಡನೇ ಕಂತಿನ ಹಣ ಸಿಗಲಿದೆ. ಆದರೆ ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಬಂದಿಲ್ಲ ಎಂದು ಚಿಂತೆಗೆ ಒಳಗಾಗಿದ್ದಾರೆ. ಅಂಥವರಿಗೆ ಸರ್ಕಾರವೇ ಭರವಸೆ ನೀಡಿದ್ದು, ಶೀಘ್ರದಲ್ಲೇ ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರನ್ನು ತಲುಪುತ್ತದೆ ಎಂದು ತಿಳಿಸಿದೆ.
ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಜಮೆಯಾಗಿಲ್ಲ, ಅವರೆಲ್ಲರು ತಮಗೆ ಇನ್ನು ಹಣ ಬಂದಿಲ್ಲ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರದೆ ಇರುವುದಕ್ಕೆ ತಾಂತ್ರಿಕ ದೋಷ ಕಾರಣ ಇರಬಹುದು. ಅಥವಾ ಬ್ಯಾಂಕ್ ಅಕೌಂಟ್ ಮಾಹಿತಿ ತಪ್ಪಾಗಿರುವುದು, ekyc ಮಾಡಿಸಿಲ್ಲದೆ ಇರುವುದು, ಹೀಗೆ ಹಲವು ಕಾರಣಗಳಿವೆ. ಆದರೆ ಇನ್ನುಮುಂದೆ ಮಹಿಳೆಯರು ಈ ಕಾರಣಕ್ಕೆ ಆತಂಕ ಪಡುವ ಅಗತ್ಯವಿಲ್ಲ.
ಇದೀಗ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆ ತಲುಪುವುದಕ್ಕೆ ದಿನಾಂಕ ಒಂದನ್ನು ನಿಗದಿ ಮಾಡಿದ್ದು, ಎಲ್ಲಾ ಮಹಿಳೆಯರು ಸಹ ಈ ದಿನಾಂಕದ ಒಳಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯುತ್ತೀರಿ. ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಈ ವಿಚಾರದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಈ ಹಿಂದೆ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು, ಆದರೆ ಈಗ ಆ ಪ್ರಕ್ರಿಯೆಯನ್ನು ಸುಲಭ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಸರ್ಕಾರದ ಹೊಸ ನಿಯಮ ಮತ್ತು ಆದೇಶದ ಅನುಸಾರ, ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಯನ್ನು ತಲುಪಲು 15 ದಿನಗಳ ಕಾಲ ತೆಗೆದುಕೊಳ್ಳುತ್ತಿದ್ದು, ಆದರೆ ಇನ್ನುಮುಂದೆ ಅಷ್ಟು ದಿನಗಳ ಕಾಲ ಕಾಯುವ ಅಗತ್ಯವಿಲ್ಲ. ಪ್ರತಿ ತಿಂಗಳು 10 ರಿಂದ 15ನೇ ತಾರೀಕಿನ ಒಳಗೆ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಲಿದೆ. ಸರ್ಕಾರವು ಮಹಿಳೆಯರಿಗೆ ಬೇಗ ಹಣ ತಲುಪಿಸಲು ಈ ನಿರ್ಧಾರ ಮಾಡಿದೆ.