Gruhalakshmi Scheme 6th installment: ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ 6 ತಿಂಗಳು ಕಳೆಯುತ್ತಿದೆ. ಸುಮಾರು ಮಹಿಳೆಯರಿಗೆ 5 ಕಂತಿನ ಹಣ ಕೂಡ ಬಂದಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರಿಗೆ ಮೊದಲ 2 ಕಂತುಗಳ ಹಣ ಬಿಟ್ಟು ಇನ್ನೇನು ಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಸರ್ಕಾರ ರೇಷನ್ ಕಾರ್ಡ್, ಬ್ಯಾಂಕ್ ಅಕೌಂಟ್ ಇವುಗಳ ಸಮಸ್ಯೆ ಇರೋದಕ್ಕೆ ಹಣ ಬಂದಿಲ್ಲ ಎಂದು ಹೇಳುತ್ತಿದೆ.

ವಿಚಾರಿಸಲು ಆಹಾರ ಇಲಾಖೆಗೆ ಹೋದರೆ ಅವರಲ್ಲಿ ಮಾಹಿತಿ ಇಲ್ಲ, ಬ್ಯಾಂಕ್ ನಲ್ಲಿ ವಿಚಾರಿಸಿ ಎನ್ನುತ್ತಾರೆ, ಬ್ಯಾಂಕ್ ಗೆ ಹೋದರೆ ನಮಗೆ ಗೊತ್ತಿಲ್ಲ ಆಹಾರ ಇಲಾಖೆಗೆ ಹೋಗಿ ಅಂತ ಹೇಳುತ್ತಾರೆ ಎಂದು ಮಹಿಳೆಯರು ತಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಾ ಇಲ್ವಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯರು ಹೇಳುವ ಪ್ರಕಾರ ಅವರ ಬ್ಯಾಂಕ್ ಅಕೌಂಟ್ ಸರಿಯಾಗಿಯೇ ಇದೆ, ಸರ್ಕಾರದ ಸಮಸ್ಯೆ ಇಂದಲೇ ಹಣ ಬಂದಿಲ್ಲ.

ಹೀಗಾಗಿ ಇದು ಸರ್ಕಾರದ ತೊಂದರೆಯೇ ಎಂದು ಗೊತ್ತಾಗುತ್ತಿದೆ. ಸರ್ಕಾರವು ಈ ಸಮಸ್ಯೆಗಳನ್ನು ಸರಿ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವು ಕೂಡ ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ನಿಮ್ಮ ಖಾತೆಗೆ ಹಣ ಬಂದ ಕೂಡಲೇ ಎಸ್.ಎಂ.ಎಸ್ ಬರುತ್ತದೆ. ಒಂದು ವೇಳೆ ಅಕೌಂಟ್ ಗೆ ಹಣ ಬಂದಿಲ್ಲ ಎಂದರೆ ಅದರ ಅರ್ಥ ನಿಮ್ಮ ಬ್ಯಾಂಕ್ ಅಕೌಂಟ್ ekyc ಆಗಿರದೇ ಇರುವುದು ಕೂಡ ಇರಬಹುದು.

ಹಾಗಾಗಿ ಸರ್ಕಾರವು ಗೃಹಲಕ್ಷ್ಮಿ ಅದಾಲತ್ ಹಾಗೂ ಗೃಹಲಕ್ಷ್ಮಿ ಕ್ಯಾಂಪ್ ಗಳನ್ನು ಸರಿಪಡಿಸುವ ಕೆಲಸ ಮಾಡಿತು. ಈಗಾಗಲೇ 5ನೇ ಕಂತಿನ ಹಣ ಜಮೆ ಆಗಿದ್ದು, 6ನೇ ಕಂತಿನ ಹಣ ಯಾವಾಗ ಜಮೆ ಆಗುತ್ತದೆ ಎನ್ನುವ ಪ್ರಶ್ನೆ ಜನರಲ್ಲಿದೆ, ಅದಕ್ಕೆ ಈಗ ಉತ್ತರ ಸಿಕ್ಕಿದ್ದು, ಫೆಬ್ರವರಿ ತಿಂಗಳ ಮೊದಲ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಈಗಾಗಲೇ ₹10,000 ಹಣ ಬಂದಿದ್ದು, 6ನೇ ಕಂತನ್ನು ಸೇರಿಸಿದರೆ, ₹12,000 ಪಡೆದ ಹಾಗೆ ಆಗುತ್ತದೆ.

Leave a Reply

Your email address will not be published. Required fields are marked *