ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾದ ಗ್ರಹಲಕ್ಷ್ಮಿ ಯೋಜನೆಯು ಈಗಾಗಲೇ ತನ್ನ ಫಲಾನುಭವಿಗಳ ಖಾತೆಗೆ 2000 ಸಹಾಯಧನವನ್ನ ಘೋಷಣೆ ಮಾಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ರಾಜ್ಯದ ಮಹಿಳೆಯರ ಖಾತೆಗೆ ಯೋಜನೆಯ ಹಣ ಜಮಾ ಆಗಿದ್ದು ಸರ್ಕಾರ ನೀಡಿರುವ ನಾಲ್ಕು ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ.

ಈ ಯೋಜನೆಯನ್ನ ಅಗಸ್ಟ್ 30ನೇ ತಾರೀಕಿನಂದು ಜಾರಿಗೆ ತರಲಾಯಿತು, ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಗ್ರಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದರು ಒಟ್ಟು ಕರ್ನಾಟಕದ 1.28 ಕೋಟಿ ಮಹಿಳೆಯರ ಖಾತೆಗೆ ರೂ 2,000 ಹಣ ಜಮಾ ಆಗಿದ್ದು ಮಹಿಳೆಯರು ಎಲ್ಲೆಡೆ ಈ ಸಂಭ್ರಮವನ್ನ ಆಚರಿಸಿ ಖುಷಿಪಟ್ಟಿದ್ದಾರೆ ಈ ಉದ್ಘಾಟನಾ ಕಾರ್ಯಕ್ರಮವನ್ನು ಏಕಕಾಲಗಳಲ್ಲಿ ಸುಮಾರು 11 ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಬೇಕೆಂದು ಸಿದ್ದರಾಮಯ್ಯ ಹೇಳಿದ್ದರು ಅದೇ ರೀತಿಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಈ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗುವ ಪ್ರಕ್ರಿಯೆ ಹಲವಾರು ತಾಂತ್ರಿಕ ಕಾರಣಗಳಿಂದ ಮುಂದೂಡುತ್ತಾ ಬಂದಿದ್ದರು ಆದರೆ ಇದೀಗ ಅಂತಿಮವಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳಿಗೆ ದೊರಕಿದೆ ಇನ್ನೂ ಕೂಡ ಹಲವಾರು ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಬಾಕಿ ಉಳಿದಿದ್ದು ಎಲ್ಲರೂ ತಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ಗಳೊಂದಿಗೆ ಸೇವಾ ಕೇಂದ್ರಗಳಾದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಕಂದ್ರಗಳಲ್ಲಿ ಹೋಗಿ ಆದಷ್ಟು ಬೇಗ ನೋಂದಾವಣೆ ಮಾಡಿಕೊಳ್ಳಬೇಕು. ಈ ಮೂಲಕ ಮುಂಬರುವ ದಿನಗಳಲ್ಲಿ ದೊರೆಯಲಿರುವ ಗೃಹಲಕ್ಷ್ಮಿ ಹಣಕ್ಕೆ ಇವರು ಕೂಡ ಪಲಾನುಭವಿಗಳಾಗಬೇಕು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರು ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಂದು ತಿಳಿದುಕೊಳ್ಳಲು ಏನು ಮಾಡಬೇಕು. ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಪಡೆದ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಬರುತ್ತದೆ ಇಲ್ಲದೇ ಇದ್ದಲ್ಲಿ ನಿಮ್ಮ ಬ್ಯಾಂಕ್ ಖಾತೆಯ ವಿಳಾಸಕ್ಕೆ ಭೇಟಿ ಕೊಟ್ಟು ಉಳಿತಾಯ ಖಾತೆಯ ಮಾಹಿತಿಯನ್ನ ತಿಳಿದುಕೊಳ್ಳುವ ಮೂಲಕ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂದು ದೃಢಪಡಿಸಿಕೊಳ್ಳಬಹುದು ಇದರ ಜೊತೆಗೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಸಹ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದೆ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು ಈ ಮೂಲಕ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಅಥವಾ ಇಲ್ಲವೇ ಎಂಬುದನ್ನು ಕೂಡ ತಿಳಿದುಕೊಳ್ಳಬಹುದು.

By AS Naik

Leave a Reply

Your email address will not be published. Required fields are marked *