ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ 6 ತಿಂಗಳು ಕಳೆಯುತ್ತಿದೆ. ಸುಮಾರು ಮಹಿಳೆಯರಿಗೆ 5 ಕಂತಿನ ಹಣ ಕೂಡ ಬಂದಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರಿಗೆ ಮೊದಲ 2 ಕಂತುಗಳ ಹಣ ಬಿಟ್ಟು ಇನ್ನೇನು ಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಸರ್ಕಾರ ರೇಷನ್ ಕಾರ್ಡ್, ಬ್ಯಾಂಕ್ ಅಕೌಂಟ್ ಇವುಗಳ ಸಮಸ್ಯೆ ಇರೋದಕ್ಕೆ ಹಣ ಬಂದಿಲ್ಲ ಎಂದು ಹೇಳುತ್ತಿದೆ.
ವಿಚಾರಿಸಲು ಆಹಾರ ಇಲಾಖೆಗೆ ಹೋದರೆ ಅವರಲ್ಲಿ ಮಾಹಿತಿ ಇಲ್ಲ, ಬ್ಯಾಂಕ್ ನಲ್ಲಿ ವಿಚಾರಿಸಿ ಎನ್ನುತ್ತಾರೆ, ಬ್ಯಾಂಕ್ ಗೆ ಹೋದರೆ ನಮಗೆ ಗೊತ್ತಿಲ್ಲ ಆಹಾರ ಇಲಾಖೆಗೆ ಹೋಗಿ ಅಂತ ಹೇಳುತ್ತಾರೆ ಎಂದು ಮಹಿಳೆಯರು ತಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಾ ಇಲ್ವಾ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಇನ್ನೂ ಕೆಲವು ಮಹಿಳೆಯರಿಗೆ ಒಂದೇ ಒಂದು ಕಂತಿನ ಹಣ ಕೂಡ ಬಂದಿಲ್ಲ. ಈ ಮಹಿಳೆಯರು ತಮಗೆ ಹಣ ಬರುತ್ತಾ ಎಂದು ತಲೆಕೆಡಿಸಿಕೊಂಡಿದ್ದಾರೆ.
ಮಹಿಳೆಯರಿಗೆ ಇನ್ನು ಕೂಡ ಒಂದೂ ಕಂತಿನ ಹಣ ಬರದೆ ಇದ್ದರೆ ನೀವು ಈ ಒಂದು ಕೆಲಸವನ್ನು ಕಡ್ಡಾಯವಾಗಿ ಮಾಡಿ, ಆಗ ಒಂದೇ ಸಾರಿ 5 ಕಂತುಗಳ ಹಣ ನಿಮಗೆ ಬರುತ್ತದೆ. ಮೊದಲಿಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಎರಡನ್ನು ಚೆಕ್ ಮಾಡಿಕೊಳ್ಳಿ. ಲಿಂಕ್ ಆಗಿಲ್ಲ ಎಂದರೆ, NCPI ಮ್ಯಾಪಿಂಗ್ ಮಾಡಿಲ್ಲ ಎಂದರೆ, ಆ ಎರಡು ಕೆಲಸವನ್ನು ಕೂಡಲೇ ಮಾಡಿಸಿ. ಆಗ ಒಂದೇ ಸಾರಿ ನಿಮಗೆ 5 ಕಂತುಗಳ ಹಣ ₹10,000 ರೂಪಾಯಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗುತ್ತದೆ.
ಇನ್ನು ಈಗಾಗಲೇ 5 ಕಂತುಗಳ ಹಣ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಂದಿದ್ದರೆ, ನಿಮಗಾಗಿ 6ನೇ ಕಂತಿನ ಹಣ ವನ್ನು ಈ ತಿಂಗಳು ಬಿಡುಗಡೆ ಮಾಡಲಿದೆ ಸರ್ಕಾರ. ಆದರೆ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದಕ್ಕೆ ಅಧಿಕೃತ ಮಾಹಿತಿ ಅಥವಾ ದಿನಾಂಕವನ್ನು ಇನ್ನು ತಿಳಿಸಿಲ್ಲ. ಇನ್ನೊಂದು ವಾರದಲ್ಲಿ 6ನೇ ಕಂತಿನ ಹಣ ಎಲ್ಲರಿಗೂ ಸಹ ಸಿಗುತ್ತದೆ ಎಂದು ಹೇಳಲಾಗುತ್ತಿದೆ.