Gruhalakshmi Yojana Ineligible List Released: ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಮದುವೆಯಾಗಿ ಮನೆ ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಉದ್ದೇಶ ಇದಾಗಿದ್ದು, ಈಗಾಗಲೇ ಸುಮಾರು 1.15ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ.

2ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಎಲ್ಲಾ ಮಹಿಳೆಯರು ಕಾದು ಕುಳಿತಿದ್ದಾರೆ. ಸರ್ಕಾರದಿಂದ ಸಿಕ್ಕಿರುವ ಮಾಹಿತಿಯ ಅನುಸಾರ, ಶೀಘ್ರದಲ್ಲೇ ಎರಡನೇ ಕಂತಿನ ಹಣ ಸಿಗಲಿದೆ. ಆದರೆ ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಬಂದಿಲ್ಲ ಎಂದು ಚಿಂತೆಗೆ ಒಳಗಾಗಿದ್ದಾರೆ. ಅಂಥವರಿಗೆ ಸರ್ಕಾರವೇ ಭರವಸೆ ನೀಡಿದ್ದು, ಶೀಘ್ರದಲ್ಲೇ ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರನ್ನು ತಲುಪುತ್ತದೆ ಎಂದು ತಿಳಿಸಿದೆ.

ಹಲವು ಮಹಿಳೆಯರಿಗೆ ಇನ್ನು ಮೊದಲ ಕಂತಿನ ಹಣವೇ ಜಮೆಯಾಗಿಲ್ಲ, ಅವರಿಗೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ನವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟಿದ್ದು, ಎರಡು ಕಂತಿನ ಹಣ ಒಟ್ಟಿಗೆ 4000 ರೂಪಾಯಿ ಅಕೌಂಟ್ ಗೆ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಈ ವಿಚಾರವನ್ನು ಖುದ್ದು ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ.

Gruhalakshmi Yojana Ineligible List Released

ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ..” ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಇದೀಗ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅರ್ಹತೆ ಹೊಂದಿಲ್ಲದೆ ಇರುವವರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದು, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎನ್ನುವುದನ್ನು ಹೇಗೆ ಚೆಕ್ ಮಾಡುವುದು ಎಂದು ಪೂರ್ತಿಯಾಗಿ ತಿಳಿಸಿಕೊಡುತ್ತೇವೆ ನೋಡಿ.. ಮೊದಲಿಗೆ ನೀವು ರಾಜ್ಯ ಸರ್ಕಾರ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ahara.kar.nic.in/Home/EServices ಇದು ಅಧಿಕೃತ ವೆಬ್ಸೈಟ್ ಆಗಿದೆ.

ಈಗ ಅಲ್ಲಿ ಕಾಣುವ 3 ಲೈನ್ ಮೇಲೆ ಕ್ಲಿಕ್ ಮಾಡಿ, ಇಲ್ಲಿ Show Cancelled/Suspended ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ. ಈಗ ನಿಮ್ಮ ಸ್ಕ್ರೀನ್ ಮೇಲೆ ಲಿಸ್ಟ್ ಬರುತ್ತದೆ, ಇದರಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. ಈಗ ನೀವು ಅನರ್ಹರ ಪಟ್ಟಿಯನ್ನು ಪಟ್ಟಿಯನ್ನು ನೋಡಬಹುದು. ಇದರಲ್ಲಿ ನಿಮ್ಮ ಅಪ್ಲಿಕೇಶನ್ ಕ್ಯಾನ್ಸಲ್ ಆಗಿರುವುದು ಯಾಕೆ ಎಂದು ಕಾರಣವನ್ನು ಕೂಡ ನೀಡಲಾಗುತ್ತದೆ.

ಇದೀಗ ಗೃಹಲಕ್ಷ್ಮಿ ಯೋಜನೆಗೆ ಮತ್ತೊಂದು ಹೊಸ ನಿಯಮ ಜಾರಿಗೆ ತರಲಾಗಿದ್ದು,5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಮತ್ತು ಸ್ವಂತ 4 ಚಕ್ರದ ವಾಹನ ಹೊಂದಿರುವವರಿಗೆ ಗೃಹಲಕ್ಷ್ಮಿ ಯೋಜನೆಯ 2000 ಸಿಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಅಷ್ಟೇ ಅಲ್ಲದೆ, ಈಗಾಗಲೇ ಸರ್ಕಾರಿ ಪೆನ್ಶನ್ ಪಡೆಯುತ್ತಿರುವವರು ಮತ್ತು ಇನ್ಕಮ್ ಟ್ಯಾಕ್ಸ್ ಕಟ್ಟುವವರಿಗು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಸಿಗುವುದಿಲ್ಲ.

ಇದನ್ನೂ ಓದಿ ಮದುವೆಯಾಗಿದ್ದರು ಪರಪುರುಷನ ಜೊತೆ ಓಡಿ ಹೋದ ಮಹಿಳೆ, ವಿಷಯ ಗೊತ್ತಾಗಿ ಗಂಡ ಮಾಡಿದ್ದೇನು? ನಿಜಕ್ಕೂ ಇಂತವರು ಇರ್ತಾರಾ..

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!