ಪ್ರತಿ ಮಕ್ಕಳು ಶಾಲೆಗೆ ಹೋಗುವಾಗ ಅಲ್ಲಿನ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ ಹಾಗೂ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಪಾಸ್ ಮಾಡಬೇಕಾಗುತ್ತದೆ, ಆದ್ರೆ ಇದೀಗ ಇಲ್ಲಿನ ಸರ್ಕಾರ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಮುಂದಾಗಿದೆ, ಅಷ್ಟಕ್ಕೂ ಇದು ಎಲ್ಲಿ ಯಾಕೆ ಅನ್ನೋದನ್ನ ಮುಂದೆ ನೋಡಿ ನಿಮಗೆ ಗೊತ್ತಾಗುತ್ತದೆ.
ದೇಶದಲ್ಲಿ ಮಹಾಮಾರಿ ಕೊರೋನ ವೈರಸ್ ಮರಣ ಮೃದಂಗ ಬಾರಿಸುತ್ತಿರುವ ಹಿನ್ನಲೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಇಲ್ಲಿನ ಗುಜರಾತ್ ಸರ್ಕಾರ 1 ರಿಂದ 9ನೇ ತರಗತಿಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲು ಆದೇಶ ಹೊರಡಿಸಿದೆ ಹಾಗೂ ಗುಜರಾತ್ನಲ್ಲಿ ಮಾರ್ಚ್ ತಿಂಗಳ ಆರಂಭದಲ್ಲೇ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಮಂಡಳಿಯು ನಡೆಸಿದೆ.
ಕೊರೋನ ವೈರಸ್ದೇ ವಿರುದ್ಧ ಹೋರಾಡಲು ದೇಶದಲ್ಲಿ ಕಟ್ಟು ನಿಟ್ಟಿನ ಕ್ರಮ ಪಾಲಿಸುವ ಉದ್ದೇಶ ಸರ್ಕಾರದಾಗಿದ್ದು ಮಾರ್ಚ್ 15ರಿಂದ ಶಾಲೆಗಳನ್ನು ಮುಚ್ಚಲಾಗಿತ್ತು. ಹೀಗಾಗಿ ಇತರ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಿಎಂ ಕಚೇರಿಯ ಕಾರ್ಯದರ್ಶಿ ಅಶ್ವನಿ ಕುಮಾರ್ ತಿಳಿಸಿದ್ದಾರೆ
ಇನ್ನು ಇದರ ಕುರಿತು ಮಾಹಿತಿ ನೀಡಿದ ಅಶ್ವನಿ ಕುಮಾರ್ ಹೇಳಿದ್ದು ಹೀಗೆ ಶಾಲೆಗಳನ್ನು ಮುಚ್ಚಲು ಕೇಳಿದ್ದರಿಂದ 1ರಿಂದ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಯ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಪಾಸ್ ಮಾಡಲು ಸಿಎಂ ನಿರ್ಧರಿಸಿದ್ದಾರೆ. ಮಕ್ಕಳನ್ನು ಸುರಕ್ಷಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಅನ್ನೋದನ್ನ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.