ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಎಚ್ ಡಿಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಕೊಡಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಎಚ್ ಡಿಎಫ್ ಸಿ ಬ್ಯಾಂಕ್ ಸ್ಕಾಲರ್ ಶಿಪ್ ಪಡೆಯಲು ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳಿರಬೇಕು, ಯಾವ ದಾಖಲಾತಿಗಳು ಬೇಕಾಗುತ್ತದೆ ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಎಚ್ ಡಿಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾಸ್ ಎಂಬ ಸ್ಕೀಮ್ ನಡಿಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು 75 ಸಾವಿರ ರೂಪಾಯಿವರೆಗೆ ಸ್ಕಾಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ಕಾಲರ್ ಶಿಪ್ ಪಡೆಯುವ ವಿದ್ಯಾರ್ಥಿಗಳು ಭಾರತೀಯರಾಗಿರಬೇಕು. ವಿದ್ಯಾರ್ಥಿಗಳು ಪ್ರಸ್ತುತ 6 ರಿಂದ 12 ನೇ ತರಗತಿಯವರೆಗೆ ಖಾಸಗಿ-ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಕಲಿತಿರಬೇಕು. ವಿದ್ಯಾರ್ಥಿ ಹಿಂದಿನ ಪರೀಕ್ಷೆಯಲ್ಲಿ ಶೇಕಡ 55 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎರಡುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು.
ಈ ಸ್ಕಾಲರ್ ಶಿಪ್ ಗೆ ಅರ್ಜಿ ಹಾಕಲು ಕೆಲವು ದಾಖಲಾತಿಗಳು ಬೇಕಾಗುತ್ತದೆ. ಪಾಸ್ ಪೋರ್ಟ್ ಸೈಜಿನ ಇತ್ತೀಚಿನ ಭಾವಚಿತ್ರ ಒಂದು, ಕಳೆದ ಪರೀಕ್ಷೆಯ ಮಾರ್ಕ್ಸ್ ಕಾರ್ಡ್ 2019- 20 ನೇ ಸಾಲಿನ ಮಾರ್ಕ್ಸ್ ಕಾರ್ಡ್ ಹೊಂದಿಲ್ಲದಿದ್ದರೆ 2018-19 ರ ಮಾರ್ಕ್ಸ್ ಕಾರ್ಡ್ ಅನ್ನು ಅಪ್ಲೋಡ್ ಮಾಡಬೇಕು. ಆಧಾರ್ ಕಾರ್ಡ್, ಪ್ರಸ್ತುತ ವರ್ಷದ ಪ್ರವೇಶ ಪುರಾವೆ ಶುಲ್ಕ ರಶೀದಿ/ ಪ್ರವೇಶ ಪತ್ರ/ ಗುರುತಿನ ಚೀಟಿ, ವಿದ್ಯಾರ್ಥಿಯ ಪಾಸ್ ಬುಕ್ ಪ್ರತಿ, ಆದಾಯ ಪ್ರಮಾಣ ಪತ್ರಗಳನ್ನು ಅಪ್ ಡೇಟ್ ಮಾಡಬೇಕು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ಮೊದಲು ಎಚ್ ಡಿಎಫ್ ಸಿ ಬ್ಯಾಂಕ್ ವೆಬ್ಸೈಟ್ ಓಪನ್ ಮಾಡಬೇಕು, ವೆಬ್ಸೈಟ್ ನಲ್ಲಿ ಕೆಳಗಡೆ ಅಪ್ಲೈ ನೌ ಎಂದು ಇರುತ್ತದೆ ಅದನ್ನು ಕ್ಲಿಕ್ ಮಾಡಬೇಕು. ನಂತರ ರಿಜಿಸ್ಟರ್ ಮಾಡಿಕೊಳ್ಳಬೇಕು ರಿಜಿಸ್ಟರ್ ಮಾಡುವಾಗ ನಿಮ್ಮ ಹೆಸರು, ಮೊಬೈಲ್ ನಂಬರ್ ಇಮೇಲ್ ಐಡಿ, ಪಾಸ್ವರ್ಡ್ ಹಾಕಿ ರಿಜಿಸ್ಟರ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ಗೆ ಒಂದು ಓಟಿಪಿ ಬರುತ್ತದೆ ಅದನ್ನು ಎಂಟ್ರಿ ಮಾಡಿ ಕೆಳಗಡೆ ವೆರಿಫೈ ಓಟಿಪಿ ಎಂಬ ಆಪ್ಷನ್ ಇರುತ್ತದೆ ಅದನ್ನು ಕ್ಲಿಕ್ ಮಾಡಬೇಕು.
ನಂತರ ನಿಮ್ಮ ಜಂಡರ್, ಸ್ಟೇಟ್, ಕ್ಲಾಸ್ ಸೆಲೆಕ್ಟ್ ಮಾಡಿ ಅಪ್ ಡೇಟ್ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ನಂತರ ಲೋಗಿನ್ ಆಗಬೇಕು, ನಂತರ ಅಪ್ಲೈ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಮತ್ತೆ ಅಪ್ಲೈ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿದ ನಂತರ ನಿಮ್ಮ ಹೆಸರು ಬರುತ್ತದೆ ಅದರ ಕೆಳಗಡೆ ಸ್ಟಾರ್ಟ್ ಅಪ್ಲಿಕೇಷನ್ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ಆಗ ಒಂದು ಫಾರ್ಮ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಹೆಸರು, ಇಮೇಲ್ ಐಡಿ, ಮೊಬೈಲ್ ನಂಬರ್, ಡೇಟ್ ಆಫ್ ಬರ್ತ್, ಆಧಾರ್ ಕಾರ್ಡ್ ನಂಬರ್, ನಿಮ್ಮ ಕುಟುಂಬದ ಆದಾಯ, ಅಡ್ರೆಸ್ ಹಾಕಿ ಸೇವ್ ಎಂಡ್ ಕಂಟಿನ್ಯೂ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ನಂತರ ಎಜುಕೇಶನ್ ಡೀಟೇಲ್ಸ್ ಕೇಳುತ್ತದೆ ಮಾರ್ಕ್ಸ್ ಕಾರ್ಡ್ ಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ನಂತರ ಫ್ಯಾಮಿಲಿ ಮೆಂಬರ್ಸ್ ಡೀಟೇಲ್ಸ್ ಹಾಕಬೇಕಾಗುತ್ತದೆ. ನಂತರ ಬ್ಯಾಂಕ್ ಡಿಟೇಲ್ಸ್ ಕೇಳುತ್ತದೆ ಪಾಸ್ ಬುಕ್ ಅನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ನಂತರ ಸಬ್ಮಿಟ್ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ನೀವು ಅಪ್ಲಿಕೇಷನ್ ಹಾಕಿದ ಪ್ರಿಂಟ್ ಔಟ್ ತೆಗೆದುಕೊಂಡು ಇಟ್ಟುಕೊಳ್ಳುವುದು ಒಳ್ಳೆಯದು. ಈ ಮಾಹಿತಿಯನ್ನು ತಪ್ಪದೆ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಿ, ಸ್ಕಾಲರ್ ಶಿಪ್ ಪ್ರಯೋಜನವನ್ನು ಪಡೆದುಕೊಳ್ಳಿ
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466