ಪ್ರತಿದಿನ ಒಂದು ಮೊಟ್ಟೆ ತಿನ್ನುವುದರಿಂದ ಏನಾಗುತ್ತೆ ಗೊತ್ತಾ?ನಿಮಗಿದು ಗೊತ್ತಿರಲಿ

Health & fitness

Health Benefits for eggs: ಮೊಟ್ಟೆ ನಾವು ತಿನ್ನುವ ಆಹಾರಗಳಲ್ಲಿ ಸೂಪರ್ ಫುಡ್ ಎಂಬ ಖ್ಯಾತಿಗೆ ಪಾತ್ರವಾಗಿದೆ. ಅತಿ ಹೆಚ್ಚು ಪ್ರಮಾಣದ ಪೋಷಕಾಂಶ ಹಾಗೂ ವಿಟಮಿನ್ ಗಳು ಸಿಗುತ್ತವೆ. ಹೀಗಾಗಿ ಪ್ರತಿ ನಿತ್ಯ ಬೇಯಿಸಿದ ಮೊಟ್ಟೆ ತಿಂದರೆ ಆರೋಗ್ಯಕ್ಕೆ ಬಹಳ ಉತ್ತಮ. ದಿನಕ್ಕೊಂದು ಮೊಟ್ಟೆ ತಿಂದರೆ ನಮ್ಮ ದೇಹಕ್ಕೆ ಯಾವ ಬಗೆಯ ಲಾಭ ಎಂಬುದನ್ನ ಈ ಲೇಖನದಲ್ಲಿ ತಿಳಿಯೋಣ

ಬೆಳೆಯುವ ಮಕ್ಕಳಿಗೆ ಹಾಗೂ ಡಯಟ್ ಮಾಡುವವರಿಗೆ ಮೊಟ್ಟೆ ಬಹಳ ಉತ್ತಮ. ಇನ್ನು ಪ್ರತಿ ಮೊಟ್ಟೆಯಲ್ಲಿ ಶೇ.6 ರಷ್ಟು ವಿಟಮಿನ್ ಎ, ವಿಟಮಿನ್ ಬಿ5 ಶೇ7. ವಿಟಮಿನ್ ಬಿ12, ಶೇ15 ಹಾಗೂ ಪ್ರಾಸ್ಪರಸ್ ಶೇ9 ರಷ್ಟು ಇರುತ್ತದೆ. ಜೊತೆಗೆ ವಿಟಮಿನ್ ಇ. ಪಾಲಿಕ್ ಆಸಿಡ್, ಒಮೆಗಾ 3 ಸೇರಿದಂತೆ ಹಲವು ಅಂಶಗಳು ಮೊಟ್ಟೆಯಲ್ಲಿವೆ. ಹೀಗಾಗಿ ಮೊಟ್ಟೆ ಒಂದು ಪೂರ್ಣ ಪ್ರಮಾಣದ ಆಹಾರ. ಮೊಟ್ಟೆಯಲ್ಲಿ ಅಧಿಕ ಕೊಲೆಸ್ಟ್ರಾಲ್ ಇದೆ. ಆದರೆ ಇದು ಮನುಷ್ಮನ ದೇಹದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ.

Health Benefits for egg
Health Benefits for egg

ಈ ಕೊಲೆಸ್ಟ್ರಾಲ್ ರಕ್ತದಲ್ಲಿರುವ ಕೊಬ್ಬನ್ನು ಹೆಚ್ಚಿಸಲ್ಲ. ದೇಹದಲ್ಲಿ ಅತಿ ಹೆಚ್ಚು ಸಾಂದ್ರತೆಯುಳ್ಳ ಲಿಪ್ರೋಪ್ರೋಟೀನ್ ಎಂಬ ಅಂಶವಿರುತ್ತದೆ. ಮೊಟ್ಟೆಯಲ್ಲಿರುವ ಕೊಲೆಸ್ಟ್ರಾಲ್ ಇದರ ಪ್ರಮಾಣವನ್ನು ಕಡಿಮೆ ಮಾಡಿ. ಹೃದಯ ರೋಗ ಮತ್ತು ಪಾರ್ಶ್ವ ವಾಯುಗಳಂತ ರೋಗಗಳಿಂದ ಕಾಪಾಡುತ್ತದೆ.

ಪ್ರತಿ ನಿತ್ಯ ಒಂದು ಮೊಟ್ಟೆ ತಿಂದರೆ ಮಾಂಸಖಂಡಗಳು ಬಲವಾಗುತ್ತವೆ. ಮೊಟ್ಟೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ ಮೊಟ್ಟೆ ಮಾನವನ ಮಿದುಳನ್ನು ಆರೋಗ್ಯವಾಗಿಡುತ್ತದೆ. ಮೊಟ್ಟೆಯಲ್ಲಿ ಅಗತ್ಯವಾಗಿರುವ ವಿಟಮಿನ್ ಹಾಗೂ ಮಿನರಲ್ಸ್ ಇರುವುದರಿಂದ ಮಿದುಳು ಬೆಳೆಯಲು ಸಹಕರಿಸಿ ಬುದ್ದಿವಂತರನ್ನಾಗಿಸುತ್ತದೆ.

ಮೊಟ್ಟೆಯಲ್ಲಿ ವಿಟಮಿನ್ ಬಿ12 ಹೇರಳವಾಗಿರುವುದರಿಂದ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗರ್ಭಿಣಿಯರು ಮೊಟ್ಟೆ ತಿನ್ನುವುದರಿಂದ ಗರ್ಭದಲ್ಲಿರುವ ಶಿಶುವಿಗೆ ಪೋಷಕಾಂಶ ಹಾಗೂ ಖನಿಜಾಂಶ ಪೂರೈಕೆಯಾಗಿ ಆರೋಗ್ಯಯುತವಾಗಿ ಬೆಳೆಯಲು ಸಹಾಯವಾಗುತ್ತದೆ. ಮೊಟ್ಟೆ ದೃಷ್ಟಿ ದೋಷವನ್ನು ತಡೆಗಟ್ಟುತ್ತದೆ. ತೀವ್ರ ನಿಶಕ್ತತೆ ಹಾಗೂ ಸಣಕಲು ದೇಹದಿಂದ ಬಳಲುತ್ತಿರುವವರು ಪ್ರತಿನಿತ್ಯ ಮೊಟ್ಟೆ ತಿನ್ನುವುದರಿಂದ ಸದೃಢರಾಗಿ ಆರೋಗ್ಯಯುತ ದೇಹ ಹೊಂದಬಹುದು.

ಇದನ್ನು ಓದಿ..ತುಂಬಾ ತೆಳ್ಳಗಿದ್ದೀರಾ ಬರಿ ಈ ತಿಂಗಳಲ್ಲಿ ದಪ್ಪ ಆಗಲು, ಟಾನಿಕ್ ನಂತೆ ಕೆಲಸ ಮಾಡುತ್ತೆ ಈ ಪಾಯಸ

ಮಹಿಳೆಯರು ವಾರಕ್ಕೆ 4 ರಿಂದ 5 ಮೊಟ್ಟೆ ತಿನ್ನುವುದರಿಂದ ಸ್ತನ ಕ್ಯಾನ್ಸರ್ ನಿಂದ ದೂರ ವಿರುಬಹುದು.ಇನ್ನು ಡಯಟ್ ಮಾಡುವವರಿಗೂ ಮೊಟ್ಟೆ ಉತ್ತಮ ಆಹಾರ. ಇದರಲ್ಲಿರುವ ವಿಟಮಿನ್ಸ್ ಹಾಗೂ ಮಿನರಲ್ಸ್ ದೇಹಕ್ಕೆ ಬೇಕಾದ ಅವಶ್ಯಕ ಅಂಶಗಳನ್ನು ಪೂರೈಸುವುದರಿಂದ ಆಹಾರ ಸಮತೋಲನ ಕಾಪಾಡಬಹುದು. ಇನ್ನು ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮೊಟ್ಟೆಯಿಂದ ಕೆಲವು ಅಲರ್ಜಿ ಸಮಸ್ಯೆಗಳು ಉಂಟಾಗಬಹುದು. ಅಂಥ ಸಮಸ್ಯೆ ಇರುವವರು ವೈದ್ಯರ ಸಲಹೆ ಮೇರೆಗೆ ಮೊಟ್ಟೆ ಬಳಸುವುದು ಉತ್ತಮ.

Leave a Reply

Your email address will not be published. Required fields are marked *