Banking sector: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ನ್ಯೂಸ್

0 3

ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5000 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕರ್ನಾಟಕದಲ್ಲಿ (Karnataka) 115 ಹುದ್ದೆಗಳು ಖಾಲಿ ಇವೆ. ಅಂತೆಯೇ ಬೇರೆ ಬೇರೆ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 3, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ

ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಸಂಖ್ಯೆ: 5000 ವೇತನ ಶ್ರೇಣಿ: 10,000 ರಿಂದ 15,000 ರೂ ಉದ್ಯೋಗ ಸ್ಥಳ: All India ಶೈಕ್ಷಣಿಕ ಅರ್ಹತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು. ಅರ್ಜಿ ಶುಲ್ಕ Gen/ OBC/ EWS ಅಭ್ಯರ್ಥಿಗಳಿಗೆ: 800 ರೂ. SC/ ST/ ಮಹಿಳಾ ಅಭ್ಯರ್ಥಿಗಳಿಗೆ: 600 ರೂ. PWD ಅಭ್ಯರ್ಥಿಗಳಿಗೆ: 400 ರೂ. ಪಾವತಿ ವಿಧಾನ: ಆನ್‌ಲೈನ್ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2023 ಅಧಿಕೃತ ವೆಬ್‌ಸೈಟ್: centralbankofindia.co.in

Leave A Reply

Your email address will not be published.