ಪ್ರಿಯ ಓದುಗರೇ ನಾವು ನೀವುಗಳು ಪ್ರತಿನಿತ್ಯ ಒಂದಲ್ಲ ಒಂದು ಅನಾರೋಗ್ಯ ಸಮಸ್ಯೆಯನ್ನು ನೋಡಿರುತ್ತೀವಿ ಆದ್ರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ವಿಷಯ ಏನು ಅಂದ್ರೆ ಮನುಷ್ಯನಿಗೆ ಆಸ್ತಿ ಹಣಕ್ಕಿಂತ ಅರೋಗ್ಯ ಮುಖ್ಯವಾಗಿ ಬೇಕಾಗುತ್ತದೆ. ಹಾಗಾಗಿ ನಾವುಗಳು ಆಸ್ಪತ್ರೆಯಿಂದ ದೂರ ಉಳಿಯಬೇಕು ಅಂದ್ರೆ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ಬೆಳಗ್ಗೆ ಎಡ್ಡಾ ತಕ್ಷಣ ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯುವುದರಿಂದ ಏನಾಗುತ್ತೆ ಅನ್ನೋದನ್ನ ಮುಂದೆ ನೋಡಿ ನಿಮಗೆ ಈ ಮಾಹಿತಿ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣಪಡಿಸಬಹುದು ಎಂದು ತಿಳಿದಿದೆಯಾ? ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ.

ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು! ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ. ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀರು ಜಾದು ಮಾಡಬಲ್ಲದು. ನೀವು ಊಟವಾದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆ ಕೊಬ್ಬಾಗಿ ಪರಿವರ್ತಿತವಾಗುವುದಿಲ್ಲ. ಬೆಳಗ್ಗಿನ ಅವಧಿಯಲ್ಲಿ ಬಿಸಿನೀರು ಕುಡಿಯಲು ಪ್ರಯತ್ನಿಸಿ. ಬೆಳಗ್ಗಿನ ವೇಳೆ ಬಿಸಿ ನೀರು ಕುಡಿದರೆ ಆಗುವ ಅದ್ಭುತ ಆರೋಗ್ಯ ಲಾಭಗಳು ಇಲ್ಲಿವೆ.

ಕರುಳಿನ ಕ್ರಿಯೆ ಸರಾಗ: ಬೆಳಗ್ಗೆ ಎದ್ದು ನೀವು ನೀರು ಕುಡಿದ ಕೂಡಲೇ ಮಲ ವಿಸರ್ಜನೆ ಮಾಡುವ ಅಗತ್ಯತೆ ಕಾಣಿಸುತ್ತದೆ. ಇದರಿಂದ ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗುತ್ತದೆ. ನೀವು ಪ್ರತೀ ಸಲ ಮಲ ವಿಸರ್ಜನೆ ಮಾಡಿದಾಗ ದೇಹವು ತ್ಯಾಜ್ಯದಿಂದ ಮುಕ್ತಿ ಪಡೆಯುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಪ್ರತೀ ದಿನ ನಾವು ಆಹಾರ ಅಥವಾ ಉಸಿರಾಟದ ಮೂಲಕ ಸೇವನೆ ಮಾಡುವಂತಹ ವಿಷಕಾರಿ ಅಂಶಗಳನ್ನು ನೀರು ಹೊರಹಾಕುತ್ತದೆ. ನೀವು ನೀರು ಕುಡಿದು ಮೂತ್ರ ವಿಸರ್ಜನೆ ಮಾಡಿದಾಗ ದೇಹದಲ್ಲಿನ ವಿಷಕಾರಿ ಅಂಶ ಹೊರಹೋಗುತ್ತದೆ.

ಹಸಿವು ಹೆಚ್ಚಿಸುತ್ತದೆ: ನೀರು ಕುಡಿಯುವುದರಿಂದ ಮತ್ತು ನಿಮ್ಮ ಕರುಳನ್ನು ಸ್ವಚ್ಛಗೊಳಿಸುವುದರಿಂದ ದೇಹದ ಆಯಾಸ ಕಡಿಮೆಯಾಗುತ್ತದೆ. ಬೆಳಗ್ಗೆ ಬೇಗನೆ ಹಸಿವಾಗುತ್ತದೆ ಮತ್ತು ಇದರಿಂದ ಸರಿಯಾಗಿ ಉಪಹಾರ ಮಾಡಬಹುದು. ತಲೆನೋವು ನಿವಾರಿಸುತ್ತದೆ: ನಿರ್ಜಲೀಕರಣದಿಂದಾಗಿ ಹೆಚ್ಚಿನ ಸಲ ನಮಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬೆಳಗ್ಗೆ ನೀರು ಕುಡಿಯುವುದರಿಂದ ನಿಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿಡಬಹುದು.

ಕರುಳನ್ನು ಸ್ವಚ್ಛಗೊಳಿಸುತ್ತದೆ: ಕರುಳಿನಲ್ಲಿ ಸಂಗ್ರಹವಾಗಿರುವ ಜಿಡ್ಡನ್ನು ನೀರು ಸ್ವಚ್ಛಗೊಳಿಸುತ್ತದೆ. ಇದರಿಂದ ದೇಹವು ಪೌಷ್ಠಿಕಾಂಶಗಳನ್ನು ಬೇಗನೆ ಹೀರಿಕೊಳ್ಳಲು ನೆರವಾಗುತ್ತದೆ. ಚಯಾಪಚಯ ಕ್ರಿಯೆಗೆ ವೇಗ: ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯು ಸುಮಾರು ಶೇ.24ರಷ್ಟು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ಆಹಾರವು ಬೇಗನೆ ಜೀರ್ಣವಾಗಿ, ಆಹಾರ ಸಮೀಕರಿಸಿ ತೂಕ ಕಳೆದುಕೊಳ್ಳಲು ನೆರವಾಗುತ್ತದೆ.

ರಕ್ತ ಕಣಗಳ ಸೃಷ್ಟಿ ಲ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ದೇಹವು ಕೆಂಪುರಕ್ತದ ಕಣಗಳನ್ನು ವೇಗವಾಗಿ ಉತ್ಪತ್ತಿ ಮಾಡಲು ನೆರವಾಗುತ್ತದೆ. ಇದು ಆಮ್ಲಯುಕ್ತ ರಕ್ತವಾಗಿರುವ ಕಾರಣ ನಿಮ್ಮ ಹೆಚ್ಚು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ತೂಕ ಕಳೆದುಕೊಳ್ಳಲು: ನೀವು ತೂಕ ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಆಗ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ. ಇದರಿಂದ ನೀವು ವಿಷಕಾರಿ ಟ್ರಾನ್ಸ್ ಫ್ಯಾಟ್ಸ್ ನ್ನು ಹೊರಹಾಕಲು ನೆರವಾಗುತ್ತದೆ ಮತ್ತು ದೇಹದಲ್ಲಿ ಕೊಬ್ಬಿನ ಚಯಾಪಚಯ ಕ್ರಿಯೆಯ ಮಟ್ಟ ಹೆಚ್ಚುತ್ತದೆ.

ಹೊಳೆಯುವ ತ್ವಚ್ಛೆಗೆ: ನಿಮ್ಮ ಕರುಳಿನ ಕ್ರಿಯೆ ಸರಿಯಾಗಿ ಇರದ ಸಂದರ್ಭದಲ್ಲಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗಿದ್ದರೆ ನಿಮ್ಮ ಮುಖದಲ್ಲಿ ಮೊಡವೆಗಳು ಕಡಿಮೆಯಿರುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ನಿಮ್ಮ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳಲು ನೀರು ತುಂಬಾ ಮುಖ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದಾಗ ಸೋಂಕಿನ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!