ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಕೊಡುವುದರಿಂದ ಅವರ ಮುಂದಿನ ಭವಿಷ್ಯಕ್ಕೆ ಉತ್ತಮ ಬುನಾದಿ ಸಿಕ್ಕಂತಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇರುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ ಅಗತ್ಯ ದಾಖಲಾತಿಯ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.
2020-21 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‌ಸಿ /ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತದೆ ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ 35,000 ರೂಪಾಯಿವರೆಗೆ ಪ್ರೋತ್ಸಾಹಧನ ಕೊಡಲಾಗುತ್ತದೆ. ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿ, 3 ವರ್ಷದ ಡಿಪ್ಲೊಮಾ ಕೋರ್ಸ್, ಡಿಗ್ರಿ, ಯಾವುದೆ ಸ್ನಾತಕೋತ್ತರ ಪದವಿ ಅಂದರೆ ಎಂಎ, ಎಂಎಸ್ಸಿ, ಇತರೆ. ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರಿನರಿ, ಮೆಡಿಷನ್ ಪದವಿ, ಪಿಜಿ ಕೋರ್ಸ್‌ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ 2020-21 ನೇ ಸಾಲಿನಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು 30/11/2021ಕೊನೆಯ ದಿನಾಂಕವಾಗಿದೆ.
ದ್ವಿತೀಯ ಪಿಯುಸಿ ಮತ್ತು 3 ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 20,000 ರೂಪಾಯಿ, ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಿಗೆ 25000 ರೂಪಾಯಿ, ಯಾವುದೆ ಸ್ನಾತಕೋತ್ತರ ಪದವಿ (ಎಂಎ, ಎಂಎಸ್ಸಿ, ಇತರೆ) ವಿದ್ಯಾರ್ಥಿಗಳಿಗೆ 30,000 ರೂಪಾಯಿ, ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರಿನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ ಸಿಗುತ್ತದೆ.
ವಿದ್ಯಾರ್ಥಿಗಳು ತಾವು ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಫೋಟೊ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ. ಈ ಮಾಹಿತಿ ಉಪಯುಕ್ತವಾಗಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಿ, ಅರ್ಹ ವಿದ್ಯಾರ್ಥಿಗಳು ತಪ್ಪದೆ ಅರ್ಜಿ ಸಲ್ಲಿಸಿ.