IBPS Recruitment 2023 ಆತ್ಮೀಯ ಓದುಗರೇ ಈ ಮೂಲಕ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಅವುಗಳ ಸಂಪೂರ್ಣ ಮಾಹಿತಿ ಹಾಗೂ ಶೈಕ್ಷಣಿಕ ಅರ್ಹತೆ ಏನಿರಬೇಕು ಅರ್ಜಿ ಹಾಕುವುದು ಹೇಗೆ ಕೆಲಸ ಎಲ್ಲಿ? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವಾಗ ಅನ್ನುವುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ ಕೊನೆಯವರೆಗೂ ನೋಡಿ ನಿಮ್ಮ ಸ್ನೇಹಿತರಿಗೂ ಈ ಮಾಹಿತಿ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.
2023 ರಲ್ಲಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4045 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವ ಕ್ಷೇತ್ರದಲ್ಲಿ ಉದ್ಯೋಗ ಖಾಲಿ ಇದೆ ಅಂದರೆ, ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ – IBPS ನಲ್ಲಿ
IBPS Recruitment 2023
ಹುದ್ದೆಗಳ ಹೆಸರು: ಕ್ಲರ್ಕ್
ಒಟ್ಟು ಹುದ್ದೆಗಳು: 4045
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
ವಿದ್ಯಾರ್ಹತೆ:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ, ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಅಷ್ಟೇ ಅಲ್ಲ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ: ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ SC/ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಸಂಬಳ ಎಷ್ಟಿರತ್ತೆ? ಈ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ರೂ 19,900/- ಗಳಿಂದ 47,920/-ರೂ ಗಳ ವರೆಗೆ ತಿಂಗಳ ವೇತನವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ,/ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಜುಲೈ 2023