ಇಂದಿನ ದಿನಗಳಲ್ಲಿ ಹಲವು ಕಾರಣಗಳಿಂದ ಕಲಿತಿದ್ದರೂ ಉದ್ಯೋಗಕ್ಕಾಗಿ ಪರದಾಡಬೇಕಾಗುತ್ತದೆ. ಕೊರೋನ ವೈರಸ್ ಬಂದಾಗಿನಿಂದ ಉದ್ಯೋಗ ಪಡೆಯುವುದು ಕಷ್ಟವಾಗಿದೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಸಿಹಿ ಸುದ್ದಿಯೊಂದಿದೆ. ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 641 ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ. ಈ ಹುದ್ದೆಗಳಿಗೆ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000 ರೂಪಾಯಿಯಿಂದ 37,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಎಸ್ಎಸ್ ಎಲ್ ಸಿ ಪಾಸಾಗಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ, ಈ ಪರೀಕ್ಷೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಇರುತ್ತದೆ, ನೆಗೆಟಿವ್ ಅಂಕಗಳು ಅನ್ವಯವಾಗುತ್ತದೆ.

ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಧಾರವಾಡ, ಹಾಸನ, ಗುಲ್ಬರ್ಗ, ಹುಬ್ಬಳ್ಳಿ, ಮೈಸೂರು, ತುಮಕೂರು, ಶಿವಮೊಗ್ಗಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಟ 18 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ, ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 1,000 ರೂಪಾಯಿ, ಎಸ್ ಸಿ, ಎಸ್ ಟಿ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳು 300 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 20, 2022 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜನವರಿ 20 ಕೊನೆಯ ದಿನಾಂಕವಾಗಿದೆ. 22 ಜನವರಿ 2022 ರಿಂದ 5 ಫೆಬ್ರುವರಿ 2022 ರವರೆಗೆ ಪರೀಕ್ಷೆ ನಡೆಯುತ್ತದೆ. ದಾಖಲಾತಿಗಳನ್ನು ತೆಗೆದುಕೊಂಡು ಹತ್ತಿರದ ಸೈಬರ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಈ ಮಾಹಿತಿ ಉಪಯುಕ್ತವಾಗಿದ್ದು, ಎಲ್ಲಾ ಉದ್ಯೋಗಕಾಂಕ್ಷಿಗಳಿಗೆ ತಿಳಿಸಿ.

Leave a Reply

Your email address will not be published. Required fields are marked *