ಕೇಂದ್ರ ಸಿಬ್ಬಂದಿ ನೇಮಕಾತಿಯ ಆಯೋಗದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಿಬ್ಬಂದಿ ನೇಮಕಾತಿಯ ವಿವಿಧ ಹುದ್ದೆಗಳ ಅರ್ಜಿಯ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹುದ್ದೆಗಳು:- ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 3 ಹುದ್ದೆಗಳಿವೆ. ಅವುಗಳಲ್ಲಿ ಮೊದಲನೆಯದು ಲೋವರ್ ಡಿವಿಸನ್ ಕ್ಲರ್ಕ್. ಎರಡನೆಯದು ಪೋಸ್ಟಲ್ ಅಸಿಸ್ಟೆಂಟ್. ಮೂರನೆಯದು ಡಾಟಾ ಎಂಟ್ರಿ ಆಪರೇಟರ್ಸ್. ಈ ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ:- ಒಟ್ಟಾರೆಯಾಗಿ 6000 ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದೆ. ಭಾರತದಲ್ಲಿ ಕರ್ನಾಟಕ ಸೇರಿ ಎಲ್ಲಾ ಕಡೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ವಿದ್ಯಾರ್ಹತೆ :- ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪಿಯುಸಿ ಪಾಸಾಗಿರಲೇಬೇಕು. ಇನ್ನುಳಿದ ಯಾವುದೇ ಪದವಿ ಪಾಸಾಗಿರುವ ಅವಶ್ಯಕತೆ ಇಲ್ಲ.

ವಯೋಮಿತಿ:-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಎಂದರೆ 18 ವರ್ಷ ವಯೋಮಿತಿ ಹೊಂದಿರಬೇಕು. ಗರಿಷ್ಠ ಎಂದರೆ 27 ವರ್ಷ ವಯೋಮಿತಿ ಹೊಂದಿರಬೇಕು. ಅದೇ ರೀತಿ ಎಸ್.ಸಿ.ಎಸ್.ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓ.ಬಿ.ಸಿ. ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿ.ಡಬ್ಲ್ಯೂ.ಡಿ. ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ:– ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂಪಾಯಿ 19,900 ರಿಂದ 92,300ರವರೆಗೂ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆಯ ನೇಮಕಾತಿ:- ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಇದರಿಂದ ಆಯ್ಕೆ ಮಾಡಲಾಗುತ್ತದೆ. ಡೇಟಾ ಎಂಟ್ರಿ ಆಪರೇಟರ್ಸ್ ಗಳಿಗೆ ಟೈಪಿಂಗ್ ಟೆಸ್ಟ್ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ:-ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 6-11-2020 ಆಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-12-2020 ಆಗಿದೆ. ಹಾಗೆಯೇ ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ 17-12-2020. ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19-12-2020 ಆಗಿದೆ. ಮೊದಲ ಹಂತದ ಪರೀಕ್ಷೆಯನ್ನು 12-4-2021 ರಿಂದ 27-4-2021ರವರೆಗೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:- ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಹೋಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ:-ಎಸ್ಸಿ.ಎಸ್ಟಿ, ಪಿ.ಡಬ್ಲ್ಯೂ.ಡಿ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳು 100 ರೂಪಾಯಿಗಳನ್ನು ಕಟ್ಟಬೇಕು.

ಪರೀಕ್ಷಾ ಕೇಂದ್ರಗಳು:-ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!