ನಾವಿಂದು ಭಾರತೀಯ ಅಂಚೆ ಇಲಾಖೆಯಲ್ಲಿ ನಡೆಯುತ್ತಿರುವ ಬೃಹತ್ ನೇಮಕಾತಿಯ ಕುರಿತಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ. ನೀವು ಕೂಡ ಅಂಚೆ ಇಲಾಖೆಯಲ್ಲಿ ಉದ್ಯೋಗವನ್ನು ಮಾಡಬೇಕು ಎಂಬ ಆಸೆ ಹೊಂದಿದ್ದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಐದು ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅಭ್ಯರ್ಥಿಗಳ ವಯೋಮಿತಿಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.

SSC, CHSC ನೇಮಕಾತಿ ಎರಡು ಸಾವಿರದ ಇಪ್ಪತ್ತೆರಡರ ಅಡಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಕ್ಲರ್ಕ್ ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹನ್ನೆರಡನೇ ತರಗತಿ ಪಾಸಾಗಿರಬೇಕು. ಇದು ಕೇಂದ್ರ ಸರ್ಕಾರದ ಹುದ್ದೆಯಾಗಿದ್ದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು 7 ಮಾರ್ಚ್ 2022ರವರೆಗೆ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಉದ್ಯೋಗವಕಾಶ ಇರುತ್ತದೆ ಜೊತೆಗೆ ಅಭ್ಯರ್ಥಿಗಳಿಗೆ ಹತ್ತೊಂಬತ್ತು ಸಾವಿರದಿಂದ ತೊಂಬತ್ತೆರಡು ಸಾವಿರ ರೂಪಾಯಿಯವರೆಗೆ ಮಾಸಿಕ ವೇತನ ಇರುತ್ತದೆ. ಈ ಒಂದು ಹುದ್ದೆಗೆ ಹದಿನೆಂಟು ವರ್ಷ ಮೇಲ್ಪಟ್ಟವರು ಹಾಗೂ ಇಪ್ಪತ್ತೇಳು ವರ್ಷ ಒಳಗಿನವರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಪಿಡಬ್ಲ್ಯೂಡಿ ಯುಆರ್ ಅಭ್ಯರ್ಥಿಗಳಿಗೆ ಹತ್ತು ವರ್ಷ ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ ಹದಿಮೂರು ವರ್ಷ ಪಿಡಬ್ಲ್ಯೂಡಿ ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ಹದಿನೈದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಷ್ಟು ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂದರೆ ಎಸ್ಸಿಎಸ್ಟಿ ಪಿಡಬ್ಲ್ಯೂಡಿ ಇಎಂಎಸ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಟೈಪಿಂಗ್ ಟೆಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೀವು ಕೂಡ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರೆ ಭಾರತೀಯ ಅಂಚೆ ಇಲಾಖೆಯಲ್ಲಿ ನಡೆಯುತ್ತಿರುವ ಈ ಬೃಹತ್ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರಿಗೂ ಮಾಹಿತಿಯನ್ನು ತಿಳಿಸಿರಿ.

Leave a Reply

Your email address will not be published. Required fields are marked *