ರೈಲ್ವೆ ಇಲಾಖೆಯಲ್ಲಿ ನೇರ ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿ ಸಲ್ಲಿಸಿ

0 2

ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಆಸೆಯನ್ನು ಹೊಂದಿರುವವರಿಗೆ ನಾವಿಂದು ರೈಲ್ವೆ ಇಲಾಖೆಯಲ್ಲಿ ನಡೆಯುತ್ತಿರುವ ನೇಮಕಾತಿಯ ಕುರಿತಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಇವುಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ರೈಲ್ವೆ ಇಲಾಖೆಯಲ್ಲಿ ನೇರ ನೇಮಕಾತಿ ನಡೆಯುತ್ತದೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಡಿಸೆಂಬರ್ ಇಪ್ಪತ್ತೈದು ಎರಡು ಸಾವಿರದ ಇಪ್ಪತ್ತೊಂದರ ವರೆಗೆ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಇಪ್ಪತ್ತೊಂದು ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಅಲ್ಲಿ ಮಾಹಿತಿಯನ್ನು ನೀಡಿರಲಾಗುತ್ತದೆ ಅದನ್ನು ಓದಬೇಕು.

ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.

ಇನ್ನು ಈ ಹುದ್ದೆಗೆ ಯಾವ ವಯಸ್ಸಿನವರು ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ನೋಡುವುದಾದರೆ ಹದಿನೆಂಟು ವರ್ಷ ಮೇಲ್ಪಟ್ಟವರು ಮತ್ತು ಇಪ್ಪತ್ತೈದು ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಟನೇ ತರಗತಿಯನ್ನು ಪಾಸು ಮಾಡಿರಬೇಕು

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಇಪ್ಪತ್ತು ಸಾವಿರದ ಎರಡು ನೂರು ರೂಪಾಯಿ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಲಸ ಮಾಡುವ ಸ್ಥಳ ಯಾವುದು ಎಂದರೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಕೆಲಸವನ್ನು ಮಾಡಬಹುದು. ಇಲಾಖೆಯಲ್ಲಿ ಖಾಲಿ ಇರುವ ಇಪ್ಪತ್ತೊಂದು ಹುದ್ದೆಗಳನ್ನು ಕ್ರೀಡಾ ಕೋಟದಡಿಯಲ್ಲಿ ಮೀಸಲಿಟ್ಟ ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ರೈಲ್ವೆ ನೇಮಕಾತಿ ಮಂಡಳಿಯು ಉತ್ತರ ಮಧ್ಯ ರೈಲ್ವೆಯಲ್ಲಿ ಕ್ರೀಡಾಪಟುಗಳು ಬ್ಯಾಡ್ಮಿಟನ್ ಬಾಕ್ಸಿಂಗ್ ಕ್ರಿಕೆಟ್ ಜಿಮ್ನಾಸ್ಟಿಕ್ ಹಾಕಿ ಪವರ್ಲಿಫ್ಟಿಂಗ ಟೆನಿಸ್ ಟೇಬಲ್ ಟೆನಿಸ್ ಮತ್ತು ವೇಟ್ ಲಿಫ್ಟಿಂಗ್ ನಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಕ್ರೀಡೆಗಳ ಅಡಿಯಲ್ಲಿ ಬರುವಂತಹ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದು.

ನೀವು ಕೂಡ ಮೇಲೆ ತಿಳಿಸಿರುವ ಕ್ರೀಡೆಯಲ್ಲಿ ಪರಿಣಿತಿಯನ್ನು ಪಡೆದಿದ್ದರೆ ನೀವು ಕೂಡ ರೈಲ್ವೆ ಇಲಾಖೆಯಲ್ಲಿ ನಡೆಯುತ್ತಿರುವ ನೇರನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರಿಗೂ ತಿಳಿಸಿರಿ.

Leave A Reply

Your email address will not be published.