ನಾವಿಂದು ಎರಡು ಸಾವಿರದ ಇಪ್ಪತ್ತೆರಡರ ಜನವರಿಯ ಮೊದಲ ವಾರದ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ. ಮೊದಲನೆಯ ಹುದ್ದೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಶೀಘ್ರಲಿಪಿಗಾರರ ಹುದ್ದೆಯ ನೇಮಕಾತಿ ನಡೆಯುತ್ತಿದೆ. ಅಲ್ಲಿ ಖಾಲಿ ಒಟ್ಟು ಹದಿನೇಳು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ತೇರ್ಗಡೆಯಾಗಿರಬೇಕು ಜೊತೆಗೆ ಟೈಪಿಂಗ್ ಸ್ಕಿಲ್ಸ್ ಅನ್ನು ಹೊಂದಿರಬೇಕು. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮೂವತ್ತು ಜನವೇರಿ ಎರಡು ಸಾವಿರದ ಇಪ್ಪತ್ತೆರಡು.
ಎರಡನೆಯದಾಗಿ ಕೋಸ್ಟ್ ಗಾರ್ಡ್ ನಲ್ಲಿ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಮುನ್ನೂರು ನಾವಿಕ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹದಿನಾಲ್ಕು ಜನವರಿ ಎರಡು ಸಾವಿರದ ಇಪ್ಪತ್ತೆರಡು. ಮೂರನೆಯದಾಗಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಇಲ್ಲಿ ಒಟ್ಟು ಮೂವತ್ತೊಂಬತ್ತು ಹುದ್ದೆಗಳಿದ್ದು ಯಾವುದೇ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಪ್ಪತ್ತು ಜನವರಿ ಎರಡು ಸಾವಿರದ ಇಪ್ಪತ್ತೆರಡು.
ನಾಲ್ಕನೆಯದಾಗಿ ಭಾರತೀಯ ಕೃಷಿ ಸಂಶೋಧನ ಸಂಸ್ಥೆಯಲ್ಲಿ ತಾಂತ್ರಿಕ ಸಹಾಯಕ ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಇಲಾಖೆಯಲ್ಲಿ ಒಟ್ಟು ಆರು ನೂರಾ ನಲವತ್ತೊಂದು ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸೆಸೆಲ್ಸಿ ಪಾಸಾಗಿರಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ ಹತ್ತು ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಮುಂದಿನ ಹುದ್ದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಉಡುಪಿ ದಾವಣಗೆರೆ ಯಾದಗಿರಿ ಜಿಲ್ಲೆಯಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗೆ ನಾಲ್ಕನೇ ತರಗತಿ ಮತ್ತು ಹತ್ತನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ ಹದಿನೆಂಟು ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ಒಂದು ಹುದ್ದೆಗೆ ಕೇವಲ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಮುಂದಿನ ಹುದ್ದೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಎನ್ ಡಿ ಎ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಒಟ್ಟು ಮುನ್ನೂರು ಹುದ್ದೆಗಳು ಖಾಲಿ ಇವೆ ಈ ಒಂದು ಹುದ್ದೆಗೆ ಪಿಯುಸಿ ಕಲಿಯುತ್ತಿರುವವರು ಅಥವಾ ಪಾಸ್ ಆಗಿರುವವರು ತಮ್ಮ ಅರ್ಜಿಯನ್ನು ಜನವರಿ ಹನ್ನೊಂದು ಎರಡು ಸಾವಿರದ ಇಪ್ಪತ್ತೆರಡಕರ ಒಳಗಾಗಿ ಸಲ್ಲಿಸಬೇಕು. ಮುಂದಿನ ಹುದ್ದೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಸಿಜಿಎಲ್ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇವೆ. ಯಾವುದೇ ಪದವಿಯನ್ನು ಪಾಸ್ ಆಗಿರುವ ಅಭ್ಯರ್ಥಿಗಳು ಇಪ್ಪತ್ಮೂರು ಜನವರಿ ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಮುಂದಿನ ಹುದ್ದೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಒಟ್ಟು ನೂರಾ ನಲವತ್ತೊಂದು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಯಾವುದೇ ಪದವಿಯನ್ನು ಪಡೆದಂತಹ ಅಭ್ಯರ್ಥಿಗಳು ಜನವರಿ ಇಪ್ಪತ್ತೇಳು ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಇದಿಷ್ಟು ನಾವಿಂದು ನಿಮಗೆ ತಿಳಿಸುತ್ತಿರುವ ಉದ್ಯೋಗ ಮಾಹಿತಿ ಆಗಿದೆ ನೀವು ಕೂಡ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗೂ ತಿಳಿಸಿರಿ.