Govt Jobs Karnataka: ಕೊಡಗು ( Kodagu Distric ) ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮತ್ತು ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಕರೆಯಲಾಗಿದೆ. ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನ 9 ಸಾವಿರ ರೂ.ಗಳು. ಅರ್ಜಿಗಳನ್ನು ಸಲ್ಲಿಕೆ ಮಾಡುವವರು SSLC ಉತ್ತೀರ್ಣ/ ಅನುತ್ತೀರ್ಣರಾಗಿರಬೇಕು.
ವಯೋಮಿತಿ 18 ರಿಂದ 45 ವರ್ಷಗಳು. ಹುದ್ದೆಗಳು ಖಾಲಿ ಇರುವ ವಿವರ ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳು ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇವೆ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಕೊಣಂಜಗೇರಿ, ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ, ಹಂಡ್ಲಿ, ಅಲೂರು ಸಿದ್ದಾಪುರ.
ಇದನ್ನೂ ಓದಿ..ಪಶುಪಾಲನೆ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಕರೆಯಲಾಗಿದೆ ಆಸಕ್ತರು ಅರ್ಜಿಹಾಕಿ
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಬಿರುನಾಣಿ, ದೇವರಪುರ, ಗೋಣಿಕೊಪ್ಪ, ಹಾಲುಗುಂದ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕದನೂರು, ಕೆ.ಬಾಡಗ, ಕಿರುಗೂರು, ತಿತಿಮತಿ, ಶ್ರೀಮಂಗಲದಲ್ಲಿ ಖಾಲಿ ಇವೆ. ಆಸಕ್ತರು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‌ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿ, ಕಚೇರಿಗೆ ಅಥವಾ ಎಂಆರ್‌ಡಬ್ಲ್ಯುಗಳಿಗೆ ಸಲ್ಲಿಸಬೇಕು.