ಕನ್ನಡ ಚಿತ್ರರಂಗದ ನಟ ಪ್ರೇಮ್ ಅವರ ಮಗಳು ಅಮೃತಾ ಅವರು ಚಿತ್ರರಂಗಕ್ಕೆ ಬರಲಿದ್ದಾರೆ ಅವರ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಟ ನಟಿಯರ ಮಕ್ಕಳು ಚಿತ್ರರಂಗದಲ್ಲಿ ಕಲಾವಿದರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದು, ಅದರಲ್ಲೆ ಭದ್ರ ನೆಲೆಯನ್ನು ಕಂಡುಕೊಂಡಿದ್ದಾರೆ. ಸ್ಯಾಂಡಲ್ ವುಡ್ ರೊಮ್ಯಾಂಟಿಕ್ ಹೀರೊ ಎಂದೆ ಪ್ರಸಿದ್ಧನಾಗಿರುವ ನೆನಪಿರಲಿ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಅವರು ಚಿತ್ರರಂಗಕ್ಕೆ ಪ್ರವೇಶ ಮಾಡಲಿದ್ದಾರೆ. ಇತ್ತೀಚೆಗೆ ಪ್ರೇಮ್ ಅವರ ಮಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಪೋಟೋಶೂಟ್ ಮಾಡಿಸಿದ್ದಾರೆ. ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸೆಕೆಂಡ್ ಇಯರ್ ಎಂಜಿನಿಯರಿಂಗ್ ಓದುತ್ತಿರುವ ಅಮೃತಾ ಓದಿನಲ್ಲೂ ಮುಂದೆ ಇದ್ದಾರೆ. ಬಾಲ್ಯದಿಂದಲೂ ನೃತ್ಯ ಹಾಗೂ ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡ ಅಮೃತಾ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದಾರೆ. ಮಗಳು ತಂದೆಗೆ ದೇವತೆ ಇದ್ದಂತೆ ದೇವತೆಯಂಥ ಮಗಳನ್ನು ಪಡೆಯಲು ಎಲ್ಲರಿಗೂ ಅದೃಷ್ಟವಿರುವುದಿಲ್ಲ, ಅಭಿನಂದನೆಗಳು ನನ್ನ ಅದೃಷ್ಟ ದೇವತೆಗೆ ಎಂದು ಪ್ರೇಮ್ ಅವರು ಮಗಳ ಬಗ್ಗೆ ಬರೆದುಕೊಂಡಿದ್ದಾರೆ.

ಈಗಾಗಲೇ ನಡೆದ ಸಂದರ್ಶನದಲ್ಲಿ ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂದು ಹೇಳಿಕೊಂಡಿದ್ದರು. ಪ್ರೇಮ್ ಅವರು ಪೋಟೋಶೂಟ್ ಮಾಡಿಸಬೇಕು ಎಂದು ಅಂದುಕೊಂಡಿದ್ದರು ಅದರಂತೆ ಪೋಟೋಶೂಟ್ ಮಾಡಿಸಿದರು. ಅಮೃತಾ ಅವರ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಕೆಲವರು ಯಾವಾಗ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಾರೆ ನಿಮ್ಮ ಮಗಳು ಎಂದು ಕೇಳುತ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮ್ ಅವರಂತೆ ಅವರ ಮಗಳು ಸಿನಿರಂಗದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸೋಣ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!