ನಟಿ ಲೀಲಾವತಿ ಅವರು ಅನೇಕ ಸಿನಿಮಾದಲ್ಲಿ ನಟಿಸಿ ತಮ್ಮ ಅಭಿನಯದಿಂದ ಜನರ ಮನಸನ್ನು ಗೆದ್ದರು. ಅವರಿಗೆ ವಯಸ್ಸಾಗಿದ್ದು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅವರು ಅನೇಕ ಸಾಮಾಜಿಕ ಕೆಲಸವನ್ನು ಮಾಡಿದ್ದಾರೆ. ಅವರ ಅನಾರೋಗ್ಯದ ನಡುವೆಯೂ ಅವರು ಇತರರಿಗೆ ಸಹಾಯವಾಗುವ ಕೆಲಸವನ್ನು ಮಾಡಿದ್ದಾರೆ. ಅದೇನೆಂದು ಈ ಲೇಖನದ ಮೂಲಕ ತಿಳಿಯೋಣ.

ಗಡಿ ಭಾಗದ ಹಳ್ಳಿಗಳಿಗೆ ಮೂಲ ಸೌಕರ್ಯದ ಕೊರತೆ ಸಹಜವಾಗಿ ಇರುತ್ತದೆ. ಸೌಕರ್ಯ ಇಲ್ಲದಿರುವ ಕಾರಣಕ್ಕಾಗಿ ಮೂಗು ಮುರಿಯುವ ಈ ಕಾಲದಲ್ಲಿ ತಮ್ಮ ಸ್ವಂತ ಜಮೀನು ಮಾರಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ.ಲೀಲಾವತಿ ಅವರು ಮುಂದಾಗಿದ್ದಾರೆ. ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಎಂಬ ಗ್ರಾಮದಲ್ಲಿ ಸುಮಾರು 10 ವರ್ಷಗಳ ಹಿಂದೆ ಸಣ್ಣದೊಂದು ಆಸ್ಪತ್ರೆ ನಿರ್ಮಾಣ ಮಾಡಿದ ಡಾ.ಎಂ.ಲೀಲಾವತಿ ಅವರು ಇಂದು ಮತ್ತೊಂದು ಪ್ರಾಥಮಿಕ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಸದ್ಯದಲ್ಲೆ ನೆರವೇರಿಸಿದ್ದಾರೆ.

ತಾಯಿ ಲೀಲಾವತಿ ಅಮ್ಮನವರ ಆಸೆಯಂತೆ ಚೆನ್ನೈನಲ್ಲಿರುವ ತಮ್ಮ ಸ್ವಂತ ಜಮೀನನ್ನು ಮಾರಿದ ಅವರ ಮಗ ನಟ ವಿನೋದ್ ರಾಜ್ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಡಾ.ಲೀಲಾವತಿ ಅವರ ಆರೋಗ್ಯ ಕ್ಷೀಣವಾಗಿದ್ದು ಅವರ ಅನುಪಸ್ಥಿತಿಯಲ್ಲಿ ಮಗ ನಟ ವಿನೋದ್ ರಾಜ್ ಚಾಲನೆ ನೀಡಿದರು. ಭೂಮಿ ಪೂಜೆಗೆ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಕೂಡ ಭಾಗಿಯಾಗಿ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹಾಗೂ ಅವರ ಹೆಸರಿನ ಆಸ್ಪತ್ರೆಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಈ ವೇಳೆ ಟಿಎಚ್ಓ ಡಾ. ಹರೀಶ್, ಡಾ.ಮಂಜುಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಕೃಷ್ಣಪ್ಪ, ಸದಸ್ಯ ಶ್ರೀನಿವಾಸ್, ರಾಮಕೃಷ್ಣಪ್ಪ, ಸಂತೋಷ ನಾಯಕ, ಗೋಪಾಲ್, ವೆಂಕಟೇಶ್ ಗ್ರಾಮದ ಜನರು ಮೊದಲಾದವರು ಉಪಸ್ಥಿತರಿದ್ದರು.

ಜಮೀನು ಸುಲಭವಾಗಿ ಸಿಗುತ್ತದೆ ಎಂದರೆ ಎಲ್ಲರಿಗೂ ಬೇಕು. ಆದರೆ ಹಿರಿಯ ನಟಿ ಲೀಲಾವತಿ ಅವರು ತಮ್ಮ ಹೆಸರಿನಲ್ಲಿರುವ ಜಮೀನನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಲೀಲಾವತಿ ಅವರು ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಎಲ್ಲರೂ ಮೆಚ್ಚಿದ್ದಾರೆ. ಲೀಲಾವತಿ ಅವರು ತಮ್ಮ ಪ್ರಾರಂಭದ ದಿನಗಳಲ್ಲಿ ಸಾಕಷ್ಟು ಕಷ್ಟ ಅನುಭವಿಸಿದರು. ರಾಜಕುಮಾರ್ ಅವರೊಂದಿಗಿನ ಸಂಬಂಧದ ಬಗ್ಗೆ ಸುದ್ದಿಯಾಗಿದ್ದರು. ಅವರು ಎಷ್ಟೇ ಕಷ್ಟ ಬಂದರೂ ತಮ್ಮ ಮಗನನ್ನು ಬೆಳೆಸಿ ಅವರು ಕೂಡ ಸಿನಿ ರಂಗದಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಆಸ್ಪತ್ರೆ ನಿರ್ಮಾಣವಾಗಿ ಜನರಿಗೆ ಒಳ್ಳೆಯದಾಗಲಿ ಹಾಗೂ ಲೀಲಾವತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಆಶಿಸೋಣ.

Leave a Reply

Your email address will not be published. Required fields are marked *