ಇತ್ತಿಚೆಗೆ ಅಷ್ಟೇ ನಮ್ಮನ್ನು ಅಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ಗೌರವ ನೀಡಬೇಕು ಎಂಬ ಕೂಗು ಅಭಿಮಾನಿಗಳು ಮತ್ತು ಚಿತ್ರರಂಗದಿಂದ ಕೇಳಿ ಬರುತ್ತಿದೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ’ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಅಂದರೆ, ಇಂದು ನಡೆದ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್‌ಕುಮಾರ್‌ ಅವರನ್ನು ಆಸ್ಪತ್ರೆಗೆ ಸೇರಿಸಿದಾನಿಂದ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯುವವರೆಗೂ ಡಾ.ರಾಜ್‌ಕುಮಾರ್‌ ಅವರ ಕುಟುಂಬದ ಜೊತೆಗಿದ್ದರು. ಡಾ.ರಾಜ್‌ಕುಮಾರ್‌ ಕುಟುಂಬದ ಪ್ರತಿಭಾನ್ವಿತ ನಟ, ಸಹೃದಯಿ ಪುನೀತ್‌ ರಾಜ್‌ಕುಮಾರ್‌ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ ಕಳೆದ ಶುಕ್ರವಾರದಂದು ಅಕ್ಟೋಬರ್ 29 ರಂದು ಇಹಲೋಹ ತ್ಯಜಿಸಿದ್ದಾರೆ.

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ,” ಎಂದು ತಿಳಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗೆ ಕೂಡಾ ಕೇಳಿ ಬಂದಿತ್ತು ಆಗ್ರಹ. ನಟ ಪುನೀತ್‌ ರಾಜ್‌ಕುಮಾರ್‌ ನಿಧನದ ಬಳಿಕ ಅವರ ಸಾಕಷ್ಟು ಸಮಾಜ ಸೇವೆಗಳು ಬೆಳಕಿಗೆ ಬಂದಿದ್ದವು. ಬೆನ್ನಿಗೆ ಅಭಿಮಾನಿಗಳು ಹಾಗೂ ಗಣ್ಯರಿಂದ ಪುನೀತ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಸಹ ಕೇಳಿ ಬಂದಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಇದಕ್ಕೆ ದನಿಗೂಡಿಸಿದ್ದರು.

ಪುನೀತ್‌ ರಾಜ್‌ಕುಮಾರ್‌ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆಯೂ ಸೃಷ್ಟಿಯಾಗಿತ್ತು. ಆದರೆ ಇದಕ್ಕೆ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಹಿತಿ ನೀಡಿತ್ತು. ಹೀಗಾಗಿ ಅದೂ ಕೂಡ ಸಾಧ್ಯವಾಗಲಿಲ್ಲ. ಇದೀಗ ರಾಜ್ಯ ಸರಕಾರ ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಲು ನಿರ್ಧರಿಸಿದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *