ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಮುಖ್ಯ ಹಬ್ಬ ರಕ್ಷಾ ಬಂಧನ. ಈ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ ಸಹೋದರನ ಆಶೀರ್ವಾದವನ್ನು ಪಡೆಯುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ. ಈ ವರ್ಷ ಎಂದಿನಂತೆ ಕನ್ನಡ ಚಲನಚಿತ್ರ ರಂಗದವರು ರಕ್ಷಾ ಬಂಧನವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಾವಿಂದು ನಟಿ ರಕ್ಷಿತಾ ಪ್ರೇಮ್ ಅವರು ಈ ವರ್ಷ ತಮ್ಮ ಮನೆಯಲ್ಲಿ ಹೇಗೆ ರಕ್ಷಾ ಬಂಧನವನ್ನು ಆಚರಿಸಿಕೊಂಡಿದ್ದಾರೆ ಎಂಬುದನ್ನು ನಿಮಗೆ ತಿಳಿಸಿಕೊಡುತ್ತೇವೆ.

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಇದರ ತೀರ್ಪು ಗಾರರಾಗಿದ್ದವರ ಪೈಕಿ ಕನ್ನಡದ ನಟಿ ಚಿತ್ರ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ಒಬ್ಬರು ಜೊತೆಗೆ ಇವರು ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮಕ್ಕೂ ತೀರ್ಪುಗಾರರಾಗಿದ್ದಾರೆ ಈ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಿಗಳ ಜೊತೆಗೆ ರಕ್ಷಿತಾ ಅವರು ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಈ ವರ್ಷ ರಕ್ಷಿತಾ ಅವರು ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. ಏಕ್ ಲವ್ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ತಮ್ಮ ಸಹೋದರನಾದ ರಾಣಾಗೆ ರಾಖಿ ಕಟ್ಟುವುದರ ಮೂಲಕ ಹಬ್ಬವನ್ನು ಆಚರಿಸಿದ್ದಾರೆ.

ಇದರ ಜೊತೆಗೆ ರಕ್ಷಿತಾ ಅವರು ತಮ್ಮ ಕಾಮಿಡಿ ಕೀಲಾಡಿಗಳು ತಂಡದವರೊಂದಿಗು ಹಬ್ಬವನ್ನು ಆಚರಿಸಿದ್ದಾರೆ ಕಾಮಿಡಿ ಕಿಲಾಡಿಗಳ ಖ್ಯಾತಿಯ ಸೂರಜ್ ಹಿತೇಶ್ ಜೊತೆಗೆ ಕಾಮಿಡಿ ಕೀಲಾಡಿಗಳ ಕಾರ್ಯಕ್ರಮದ ನಿರ್ದೇಶಕರಾದ ಶರಣಯ್ಯ ಅವರಿಗೆ ಮತ್ತು ಸೂರಿ ಮುಂತಾದವರಿಗೆ ರಾಖಿಯನ್ನು ಕಟ್ಟಿ ಅವರಿಗೆಲ್ಲ ತಮ್ಮ ಮನೆಯಲ್ಲಿಯೇ ತಯಾರಿಸಿದ ಕೇಕ್ ನ್ನು ಕೊಟ್ಟು ತಾವೂ ವಿಶಿಷ್ಟವಾಗಿ ಆಚರಿಸಿಕೊಂಡ ರಕ್ಷಾ ಬಂಧನದ ಫೋಟೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಕ್ಷಿತಾ ಅವರು ಕಾಮಿಡಿ ಕೀಲಾಡಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕೆಲವು ಸ್ಪರ್ಧಿಗಳಿಗೆ ತಮ್ಮ ಬ್ಯಾನರ್ ನಲ್ಲಿ ಅವಕಾಶವನ್ನು ನೀಡಿದ್ದಾರೆ.

ಒಟ್ಟಾರೆಯಾಗಿ ಕನ್ನಡ ಚಿತ್ರರಂಗದ ಹಲವಾರು ತಾರೆಗಳಂತೆ ರಕ್ಷಿತಾ ಅವರು ಕೂಡ ತಮ್ಮ ಮನೆಯಲ್ಲಿ ವಿಶಿಷ್ಟವಾಗಿ ರಕ್ಷಾ ಬಂಧನವನ್ನು ಆಚರಿಸಿಕೊಂಡಿರುವ ಫೋಟೊ ವಿಡಿಯೋ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿವೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *