ನಟಿ ಶ್ರುತಿ ಮಗಳ ನಿಜವಾದ ವಯಸ್ಸು ಎಷ್ಟು ಗೊತ್ತೇ? ನಿಜಕ್ಕೂ ಬೆರಗಾಗ್ತೀರಾ

0 13

ಚಿತ್ರರಂಗದಲ್ಲಿ ಬಂದು ಹೋಗುವ ಕಲಾವಿದರ ಸಂಖ್ಯೆ ಅಪಾರ. ಆದರೆ ಅಲ್ಲಿ ಸುದೀರ್ಘ ಕಾಲ ಉಳಿಯುವವರು ತುಂಬಾ ಕಡಿಮೆ. ಅದರಲ್ಲೂ ಕನ್ನಡ ಚಿತ್ರರಂಗದಂತಹ ಸೀಮಿತ ಮಾರುಕಟ್ಟೆಯ ಪರಿಮಿತಿಗಳಲ್ಲಿ ಕೆಲವೊಂದು ನಾಯಕನಟರುಗಳು ಹಲವು ದಶಕಗಳು ನೆಲೆ ನಿಂತಿದ್ದಾಗ ಇಲ್ಲಿಗೆ ಹೆಚ್ಚು ಬಂದು ಹೋಗುತ್ತಿದ್ದವರು ಇತರ ಭಾಷೆಗಳ ಕೆಲವೊಂದು ಪ್ರಸಿದ್ಧ ಚಿತ್ರನಟಿಯರು ಇಲ್ಲವೇ ಕೆಲವೊಂದು ಪರಭಾಷಾ ನಟಿಯರು. ಇಂತಹವರ ನಡುವೆ ಇಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಸಿಕರ ಹೃದಯದಲ್ಲಿ ನೆಲೆನಿಂತವರಲ್ಲಿ ಕನ್ನಡದ ಹುಡುಗಿ ಶ್ರುತಿ ಕೂಡ ಒಬ್ಬರು. ಆದ್ದರಿಂದ ನಾವು ಇಲ್ಲಿ ಇವರ ಮಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸುಮಾರು 120 ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನೆಲೆ ನಿಂತಿರುವ ಶ್ರುತಿ ಕನ್ನಡ ಚಿತ್ರರಂಗದ ಸ್ಥಳೀಯ ಪ್ರತಿಭೆಗಳಲ್ಲಿ ಪ್ರಮುಖರು. ಇವರು ವೀರ ಸಿಂಧೂರ ಲಕ್ಷ್ಮಣ ಚಿತ್ರದಲ್ಲಿ ಒಂದು ವರ್ಷದ ಮಗುವಾಗಿದ್ದಾಗಲೇ ಪರದೆಯ ಮೇಲೆ ಮೂಡಿದ್ದರು. ಕಲಾವಿದರ ಕುಟುಂಬದಲ್ಲಿ ಬೆಳೆದು ಬಂದ ಹುಡುಗಿ ಪ್ರಿಯದರ್ಶಿನಿ ಕೆಲವೊಂದು ಚಿತ್ರಗಳಲ್ಲಿ ಪುಟ್ಟ ಪುಟ್ಟ ಒಂದೆರಡು ಚಿತ್ರಗಳಲ್ಲಿ ಪಾತ್ರವಹಿಸಿದ ನಂತರ 1990ರ ವರ್ಷದಲ್ಲಿ ತೆರೆಕಂಡ ದ್ವಾರಕೀಶರು ನಿರ್ಮಿಸಿದ ಶ್ರುತಿ ಚಿತ್ರದಲ್ಲಿ ಹಾಡೊಂದ ಹಾಡುವೆನು ಹೃದಯ ರಾಗದಲ್ಲಿ ಎಂದು ಹಾಡುತ್ತಾ ಬಂದು ಆ ಚಿತ್ರದ ಯಶಸ್ಸಿನ ಮೂಲಕ ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲೊಬ್ಬರಾದರು.

ಶೃತಿಯವರು ಮೊದಲಿಗೆ ಮಲಯಾಳಂ ಭಾಷೆಯ ಸ್ವಂತಂ ಎನ್ನು ಕರುಥಿ ಎಂಬ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರು ನಂತರದ ದಿನಗಳಲ್ಲಿ ಅವರು ನಾಯಕ ನಟಿಯಾಗಿ ಶೃತಿ ಎಂಬ ಚಿತ್ರದಲ್ಲಿ ಅಭಿನಯಿಸಿದ್ದರು. ಈ ಚಿತ್ರ ಅವರಿಗೆ ಸಾಕಷ್ಟು ಯಶಸ್ಸನ್ನು ತಂದುಕೊಟ್ಟಿತು. ನಂತರ ಅವರು ತಾಯಿಲ್ಲದ ತವರು, ಮಿಡಿದ ಹೃದಯಗಳು, ಗೌರಿ ಗಣೇಶ, ಬೊಂಬಾಟ್ ಹೆಂಡತಿ, ಮುದ್ದಿನ ಮಾವ, ಅಕ್ಕ, ಪುಟ್ಟಕ್ಕನ ಹೈವೇ, ಕಲ್ಕಿ ಹೀಗೆ ಹಲವಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ನಟಿ ಶ್ರುತಿ ಅವರು ಕನ್ನಡ ಚಿತ್ರರಂಗದಲ್ಲಿ ವಿಷ್ಣುವರ್ಧನ್, ಅಂಬರೀಶ್, ಟೈಗರ್ ಪ್ರಭಾಕರ್, ಶಿವರಾಜಕುಮಾರ್, ಶಶಿಕುಮಾರ್, ರಮೇಶ್ ಅರವಿಂದ್, ಜಗ್ಗೇಶ್, ರಾಮ್ ಕುಮಾರ್, ಅಭಿಜಿತ್, ದೇವರಾಜ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರೊಂದಿಗೆ ಪರದೆಯನ್ನು ಹಂಚಿಕೊಂಡಿದ್ದಾರೆ.

ಸಿನಿಮಾರಂಗದಲ್ಲಿ ಯಶಸ್ವಿ ಪಡೆದ ನಟಿ ಶ್ರುತಿ ಅವರು ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್. ಮಹೇಂದರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಜೋಡಿಗೆ ಒಬ್ಬಳು ಮುದ್ದಾದ ಹೆಣ್ಣು ಮಗಳಿದ್ದಾಳೆ. ಇವರ ಮಗಳ ಹೆಸರು ಗೌರಿ. ಸದ್ಯಕ್ಕೆ ಶ್ರುತಿ ಅವರ ಮಗಳು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ಜೂನ್ 6ರಂದು ಇವರು ಹುಟ್ಟಿದ ದಿನವಾಗಿತ್ತು. 19 ವರ್ಷ ವಯಸ್ಸಿನವರಾಗಿದ್ದಾರೆ, ಶ್ರುತಿ ಅವರು ತಮ್ಮ ಮಗಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಹಾಗೆಯೇ ಇನ್ನು ಓದಿನೊಂದಿಗೆ ಹಾಡು ಕೇಳುವುದು ಹಾಗೂ ಟ್ರಾವೆಲ್ ಮಾಡುವುದು ಗೌರಿಗೆ ತುಂಬಾ ಇಷ್ಟ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಗೌರಿ ಅವರು ತಾವು ಹಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

Leave A Reply

Your email address will not be published.