ಈ ಬಾರಿಯ ಕನ್ನಡ ಬಿಗ್ ಬಾಸ್ ಗೆ ನಟಿ ವಿನಯ್ ಪ್ರಸಾದ್ ಬರ್ತಾರಾ?

0 2

ಬಿಗ್ ಬಾಸ್ ಕನ್ನಡ ಸೀಸನ್ ಎಂಟರ ರ ಪ್ರೋಮೋ ರಿಲೀಸ್ ಆಗಿದ್ದು ಶೀಘ್ರದಲ್ಲಿ ಬಿಗ್ ಬಾಸ್ ಶೋ ಕೂಡ ಆರಂಭವಾಗಲಿದೆ. ಫೆಬ್ರವರಿ ತಿಂಗಳಲ್ಲಿಯೇ ಬಿಗ್ ಬಾಸ್ ಆರಂಭವಾಗಲಿದ್ದು, ಅದಕ್ಕೆ ದೊಡ್ಡ ತಯಾರಿ ಕೂಡ ನಡೆಯುತ್ತಿದೆ. ಕೊರೊನಾ ವೈರಸ್ ಕಾರಣದಿಂದಾಗಿ ಈಗಾಗಲೇ ಈ ರಿಯಾಲಿಟಿ ಶೋ ಆರಂಭವಾಗೋದು ತಡವಾಗಿದೆ. ಈ ಬಾರಿಯ ಬಿಗ್ ಬಾಸ್‌ನಲ್ಲಿ ಯಾರು ಯಾರು ಭಾಗಿಯಾಗಲಿದ್ದಾರೆ ಎಂಬ ಕುತೂಹಲ ಆರಂಭವಾಗಿದೆ. ಈಗಾಗಲೇ ಸಾಜಷ್ಟು ಜನರ ಹೆಸರು ಕೂಡ ಕೇಳಿಬರುತ್ತಿದೆ. ಜೊತೆ ಜೊತೆಯಲಿ ಧಾರಾವಾಹಿಯ ನಟ ಅನಿರುದ್ಧ ಅವರು ಬಿಗ್ ಬಾಸ್‌ನಲ್ಲಿ ಭಾಗವಹಿಸೋದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಯಲ್ಲಿ ನಟಿ ವಿನಯಾ ಪ್ರಸಾದ್ ಅವರು ಬಿಗ್ ಬಾಸ್‌ಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ನಿಜಕ್ಕೂ ವಿನಯಾ ಪ್ರಸಾದ್ ಅವರು ಬಿಗ್ ಬಾಸ್ ಸೀಸನ್ ಎಂಟರಲ್ಲಿ ಭಾಗವಹಿಸಲಿದ್ದಾರ? ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಇದೇ ತಿಂಗಳು ಬಿಗ್ ಬಾಸ್ ಸೀಸನ್ ಎಂಟರ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಸ್ಪರ್ಧಿಗಳ ಆಯ್ಕೆ ಕೂಡ ಬಹುತೇಕ ಖಚಿತವಾಗಿದೆ. ಆದರೆ ಈ ಬಾರಿ ಬಿಗ್ ಬಾಸ್ ಎಂಟರ ಕಾರ್ಯಕ್ರಮದಲ್ಲಿ ಯಾರೆಲ್ಲ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ನಾಡಿನ ಜನತೆಯಲ್ಲಿ ಮನೆ ಮಾಡಿದೆ. ಈಗಾಗಲೇ ಸಾಕಷ್ಟು ಜನರ ಹೆಸರುಗಳು ಸಹ ಕೇಳಿಬರುತ್ತಿದೆ ಇದರ ಹಿಂದೆಯೇ ಚಂದನವನದ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಈ ಬಾರಿಯ ಈ ಬಿಗ್ ಬಾಸ್ ಮನೆಯಲ್ಲಿ ನಮ್ಮ ಕನ್ನಡದ ಹಿರಿಯ ನಟಿ ವಿನಯಾ ಪ್ರಸಾದ್ ಅವರು ಭಾಗವಹಿಸಲಿದ್ದಾರೆ ಎಂದು ಸುದ್ದಿ ಹರಡಿದೆ ಈಗಾಗಲೇ ಹಿರಿಯ ನಟಿ ವಿನಯ್ ಪ್ರಸಾದ್ ಅವರು ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಬ್ಯುಸಿ ಇರುವ ನಟಿ ವಿನಯಾ ಪ್ರಸಾದ್ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ನಾಡಿನ ಜನರನ್ನು ರಂಜಿಸಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದೆ. ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮಗಳು ಪ್ರಥಮಾ ಪ್ರಸಾದ್ ಆಂಗ್ಲ ಪತ್ರಿಕೆಯೊಂದಕ್ಕೆ ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿ ಸ್ಪಷ್ಟಪಡಿಸಿದ್ದಾರೆ.

ನಟಿ ವಿನಯ್ ಪ್ರಸಾದ್ ಅವರ ಮಗಳು ಈ ರೀತಿಯಾಗಿ ಹೇಳಿಕೊಂಡಿದ್ದಾರೆ ನನ್ನ ತಾಯಿ ಬಿಗ್ ಬಾಸ್ ಮನೆಗೆ ಹೋಗುತ್ತಿದ್ದಾರಾ? ಎಂದು ಅನೇಕ ಸಂದೇಶಗಳು ಬರುತ್ತಿವೆ ಮತ್ತು ಈ ಬಗ್ಗೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಯುತ್ತಿದೆ ಆದರೆ ನನ್ನ ತಾಯಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಈ ಬಗ್ಗೆ ಸುಖಾಸುಮ್ಮನೆ ವದಂತಿ ಹಬ್ಬಿಸಬೇಡಿ ಎಂದು ಹೇಳಿದ್ದಾರೆ. ನಟಿ ವಿನಯ ಪ್ರಸಾದ್ ಅವರ ಮಗಳು ಹೇಳಿರುವುದು ಸತ್ಯ ಈಗಾಗಲೇ ಹಿರಿಯ ನಟಿ ವಿನಯಾ ಪ್ರಸಾದ್ ಅವರು ಪ್ರಸ್ತುತ ಪಾರು ಧಾರಾವಾಹಿಯಲ್ಲಿ ಅಖಿಲಾಂಡೇಶ್ವರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅಷ್ಟೇ ಅಲ್ಲದೆ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರು ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಲಿದ್ದಾರೆ ಎಂಬ ಮಾತನ್ನು ಅವರ ಮಗಳು ಪ್ರಥಮಾ ಪ್ರಸಾದ್ ತಳ್ಳಿ ಹಾಕಿದ್ದಾರೆ. ಇದು ಕೇವಲ ವದಂತಿ ಎಂದು ಅವರು ಹೇಳಿದ್ದಾರೆ. ಅಂದಹಾಗೆ ಈ ಬಾರಿ ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ಸೋನು ಗೌಡ ಸೇರಿದಂತೆ ಅನೇಕರ ಹೆಸರು ಕೇಳಿಬರುತ್ತಿದೆ ಆದರೆ ಯಾರೆಲ್ಲ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವುದು ಬಿಗ್ ಬಾಸ್ ನೋಡುವ ಅಭಿಮಾನಿಗಳಲ್ಲಿ ಮಾತ್ರ ಕುತೂಹಲ ಕಾತುರ ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಲಿದೆ.

ಫೆಬ್ರವರಿ ಎರಡನೇ ವಾರದಲ್ಲಿ ಬಿಗ್ ಬಾಸ್ ಶೋ ಆರಂಭ ಆಗುವ ನಿರೀಕ್ಷೆ ಇದೆ. ಬಿಗ್‌ ಬಾಸ್‌ ಕನ್ನಡ ಸೀಸನ್‌ ಏಳರಲ್ಲಿ ಜನಸಾಮಾನ್ಯರಿಗೆ ಅವಕಾಶ ಇರಲಿಲ್ಲ. ಆದರೆ ಈ ಬಾರಿ ಸಾಮಾನ್ಯ ಜನರಿಗೆ ಅವಕಾಶ ಇದೆಯಾ ಎಂದು ನೋಡಬೇಕಿದೆ. ಅಷ್ಟೇ ಅಲ್ಲದೆ ಬೇರೆ ಬೇರೆ ಕ್ಷೇತ್ರಗಳ ಗಣ್ಯರು ಈ ವಿವಾದಾತ್ಮಕ ಶೋನಲ್ಲಿ ಭಾಗವಹಿಸಲಿದ್ದಾರೆ. ಒಟ್ಟಿನಲ್ಲಿ ಬಿಗ್ ಬಾಸ್ ಶೋ ನೋಡಲು ಪ್ರೇಕ್ಷಕರು ಕಾತುರದಿಂದಿದ್ದಾರೆ.

Leave A Reply

Your email address will not be published.