ಡಿ ಬಾಸ್, ರಚಿತಾ ರಾಮ್, ರವಿಚಂದ್ರನ್ ಹಾಗೂ ಸುಮಲತಾ ಅಂಬರೀಶ್ ಅವರಿಗೆ ಕ್ರಾಂತಿ ಸಿನಿಮಾದಲ್ಲಿ ಸಂಭಾವನೆ ಎಷ್ಟು ಗೊತ್ತಾ

0 13

kranthi movie kannada: ಕ್ರಾಂತಿ ಸಿನಿಮಾ ಈಗಾಗಲೇ ದೊಡ್ಡ ಮಟ್ಟದಲ್ಲಿ ಯುಟ್ಯೂಬ್ ಚಾನೆಲ್ ಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಪ್ರಚಾರವನ್ನು ಪಡೆದುಕೊಳ್ಳುತ್ತಿದೆ. ಇದೇ ಜನವರಿ 26ರಂದು ಅದ್ದೂರಿಯಾಗಿ ಪಂಚ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದರ ನಡುವಲ್ಲಿ ಚಿತ್ರಕ್ಕಾಗಿ ಚಿತ್ರದ ಪ್ರಮುಖ ಕಲಾವಿದರು ಪಡೆಯುತ್ತಿರುವ ಸಂಭಾವನೆ ಎಷ್ಟು ಎಂಬುದರ ಕುರಿತಂತೆ ಎಲ್ಲರೂ ಕೂಡ ಮಾತನಾಡಿಕೊಳ್ಳುತ್ತಿದ್ದಾರೆ.

ಮೊದಲಿಗೆ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮದರ್ ಇಂಡಿಯಾ ಸುಮಲತಾ ಅಂಬರೀಶ್ ಅವರು ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಕುರಿತಂತೆ ಎಲ್ಲರಲ್ಲೂ ಕೂಡ ಕುತೂಹಲ ಇದೆ. ಹೌದು ಮಿತ್ರರೇ ಈ ಸಿನಿಮಾಗಾಗಿ ಸುಮಲತಾ ಅಂಬರೀಶ್ ಅವರು ಮೂವತ್ತರಿಂದ 40ಲಕ್ಷ ಸಂಭಾವನೆ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದ ಮತ್ತೊಬ್ಬ ಪ್ರಮುಖ ಕಲಾವಿದ ಆಗಿರುವ ಕ್ರೇಜಿಸ್ಟಾರ್ ರವಿಚಂದ್ರನ್ ಅವರು 1 ಕೋಟಿ ರೂಪಾಯಿ ಆಸು ಪಾಸಿನಲ್ಲಿ ಕ್ರಾಂತಿ ಸಿನಿಮಾಗಾಗಿ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ.

kranthi movie Kannada

ಚಿತ್ರದ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಕಾಣಿಸಿಕೊಂಡಿದ್ದು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸದ್ಯಕ್ಕೆ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆಯನ್ನು ಪಡೆಯುವ ನಾಯಕಿಯಾಗಿ ರಚಿತಾರಾಮ್ ಕಾಣಿಸಿಕೊಂಡಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ನಟಿಸಿರುವ ಕ್ರಾಂತಿ ಸಿನಿಮಾದಲ್ಲಿ ನಟಿಸುವುದಕ್ಕೆ ಬರೋಬ್ಬರಿ 60 ರಿಂದ 70 ಲಕ್ಷ ಸಂಭಾವನೆಯನ್ನು ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಇಷ್ಟೊಂದು ಹೆಚ್ಚಿನ ಸಂಭಾವನೆಯನ್ನು ಪಡೆಯಲು ಈ ಸಿನಿಮಾ ಪಂಚಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ ಎನ್ನುವುದು ಕೂಡ ಮತ್ತೊಂದು ಕಾರಣವಾಗಿದೆ ಎನ್ನುತ್ತಾರೆ.

ಇನ್ನು ಕೊನೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ರಾಂತಿ ಸಿನಿಮಾಗಾಗಿ ಈಗಾಗಲೇ ಪ್ರಚಾರಕ್ಕಾಗಿ ಪ್ರತಿಯೊಂದು ಯೂಟ್ಯೂಬ್ ಸಂದರ್ಶನಗಳಲ್ಲಿ ಕೂಡ ಭಾಗವಹಿಸುತ್ತಿದ್ದಾರೆ. ಸಿನಿಮಾಗಾಗಿ ಸಂಭಾವನೆಯ ರೂಪದಲ್ಲಿ ಭರ್ಜರಿ 15 ಕೋಟಿ ಡಿ ಬಾಸ್ ಪಡೆದುಕೊಂಡಿದ್ದಾರೆ. ಸಿನಿಮಾ ಮೂಲಗಳಿಂದ ಕೇಳಿ ಬರುತ್ತಿರುವ ಇನ್ನೂ ಹಲವಾರು ಮಾಹಿತಿಗಳ ಪ್ರಕಾರ ಕೇವಲ ಸಂಭಾವನೆ ಮಾತ್ರವಲ್ಲದೆ ಲಾಭದಲ್ಲಿ ಬರುವಂತಹ ಪಾಲನ್ನು ಕೂಡ ಶೇರ್ ರೂಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪಡೆದುಕೊಳ್ಳುತ್ತಾರೆ ಎಂಬುದಾಗಿ ಸುದ್ದಿ ಇದೆ. ಕ್ರಾಂತಿ ಚಿತ್ರದ ಈ ಪ್ರಮುಖ ಕಲಾವಿದರ ಸಂಭಾವನೆಯ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ.

Leave A Reply

Your email address will not be published.