ಕರ್ನಾಟಕ ಬ್ಯಾಂಕ್ ನಲ್ಲಿ ಆಫೀಸರ್ ಹುದ್ದೆಗಳು ಖಾಲಿ ಇವೆ, ಆಸಕ್ತರು ಅರ್ಜಿಹಾಕಿ

0 3,137

Karnataka Bank Jobs ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.

ಹುದ್ದೆಯ ಹೆಸರು : Karnataka bank ಆಫೀಸರ್ಸ್ (scale-1)
ವಿದ್ಯಾರ್ಹತೆ : ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು (ಪೋಸ್ಟ್ ಗ್ರಾಜುಯೆಟ್ ಡಿಪ್ಲೊಮಾ/ 1 ವರ್ಷ ಎಕ್ಸಿಕ್ಯೂಟಿವ್ ಎಂಬಿಎ ಹೊರತುಪಡಿಸಿ). ಆಗ್ರಿಕಲ್ಬರಲ್ ಸೈನ್ಸ್ ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದು. ಎಂಬಿಎ (ಮಾರ್ಕೆಟಿಂಗ್/ಫೈನಾನ್ಸ್) ಪದವೀಧರರಿಗೆ ಆದ್ಯತೆ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ವಿಧಾನ :ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆ ನಡೆಯುವ ಸ್ಥಳಗಳು ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ , ಚೆನ್ನೈ ಮತ್ತು ದೆಹಲಿ.

ಅರ್ಜಿ ಶುಲ್ಕ : ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ. 700 ಮತ್ತು ಉಳಿದ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 12 ಹಾಗೂ ಕೊನೆಯ ದಿನಾಂಕ ಅಗಸ್ಟ್ 26.

Leave A Reply

Your email address will not be published.