BPL ಕಾರ್ಡ್ ಇರುವವರೇ ಇತ್ತ ಗಮನಿಸಿ ಮನೆಯಲ್ಲಿ ಟಿವಿ ಬೈಕ್ ಫ್ರಿಡ್ಜ್ ಇದ್ರೆ ಪಡಿತರ ಚೀಟಿರದ್ದು

0 0

ಸತತ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕೆಳವರ್ಗ, ಕೆಳಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷಕ್ಕಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ.

ಮನೆಯಲ್ಲಿ ಮೋಟಾರ್ ಸೈಕಲ್, ಟಿವಿ, ಫ್ರಿಡ್ಜ್ ಇದ್ದರೆ, ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು, ಅರೆ ಸರ್ಕಾರಿ ನೌಕರರು ಇರುವಂತಹ ಕುಟುಂಬಗಳು, ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಕುಟುಂಬವು ಈ ವಿಳಾಸದಲ್ಲಿ ವಾಸವಿಲ್ಲದಿರುವುದು. ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು. 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು. ವಾರ್ಷಿಕ 1.20 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ ಎಂದಿದ್ದಾರೆ.

ಇನ್ನುಇದರ ವಿಚಾರವಾಗಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಕಿಡಿಕಾರಿರುವ ಶಾಸಕ ಸೋಮಶೇಖರ ರೆಡ್ಡಿ ಯಾವುದೇ ನಿರ್ಧಾರವನ್ನು ಏಕಾಏಕಿ ಜಾರಿ ಮಾಡುವ ಮೊದಲು ಸಚಿವ ಸಂಪುಟದಲ್ಲಿ ಚರ್ಚೆ ಮಾಡಬೇಕು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಇರುತ್ತದೆ. ಬೈಕ್ ನ್ನು ಸಾಲ ಮಾಡಿ ಕೂಡ ಕೊಂಡುಕೊಳ್ಳುತ್ತಾರೆ. ಹೀಗಿರುವಾಗ ಬಿಪಿಎಲ್ ಕಾರ್ಡ್ ನ್ನೇ ರದ್ದು ಮಾಡುವುದು ತಪ್ಪು. ನಿಜವಾದ ಬಡತನವನ್ನು ಜನರ ಆರ್ಥಿಕ ಮಟ್ಟದಿಂದ ಗುರುತಿಸಬೇಕು. ಸಚಿವರ ಈ ನಿರ್ಧಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು 15 ದಿನಗಳ ಒಳಗೆ ಅದನ್ನು ಹಿಂದಿರುಗಿಸಬೇಕು. ನಿಗದಿತ ಸಮಯದಲ್ಲಿ ಕಾರ್ಡ್‌ಗಳನ್ನು ವಾಪಸ್ ನೀಡದವರನ್ನು ಆಧಾರ್ ದೃಢೀಕರಣದ ಮೂಲಕ ಪತ್ತೆ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉಪನಿರ್ದೇಶಕರಿಗೆ ಉಮೇಶ್ ಕತ್ತಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಆಹಾರ ಧಾನ್ಯಗಳನ್ನು ಒದಗಿಸಲು ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆದರೆ ಆರ್ಥಿಕವಾಗಿ ಸದೃಢರಾಗಿರುವ ಕುಟುಂಬದವರು ಕೂಡ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಅಂತಹವರಿಗೆ ಕಾರ್ಡ್ ವಾಪಸ್ ನೀಡಲು ಅವಕಾಶ ಕೊಡಲಾಗಿತ್ತು. ಶೇ 55-60ರಷ್ಟು ಮಂದಿ ಮಾತ್ರ ಕಾರ್ಡ್ ಹಿಂದಿರುಗಿಸಿದ್ದಾರೆ. ಈಗ ಉಳಿದವರಿಗೆ ಕಡೆಯ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.