ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. 10 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಪ್ರಸತವನೇ ಸಲ್ಲಿಸಿದ್ದಾರೆ.
ವಿಧಾನಸಭೆಯಲ್ಲಿ ಸಂಸದ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆಯಿಂದ ಅನುಮತಿ ಕೋರಲಾಗಿದೆ.
ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 7,500 ಹಾಗೂ ಪ್ರೌಢಶಾಲಾ ಶಿಕ್ಷಕರ 2,500 ಹುದ್ದೆಗಳನ್ನು ಭರ್ತಿ ಮಾಡಲು ಯೋಜನೆ ರೂಪಿಸಲಾಗಿದೆ. ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ, 8,954 ಅತಿಥಿ ಶಿಕ್ಷಕರನ್ನು ಸಾರ್ವಜನಿಕ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ತುಂಬಲು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ 10 ಸಾವಿರ ಶಿಕ್ಶರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಆಸಕ್ತರು ಅರ್ಜಿಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ.