Karnataka Transport Department: ರಾಜ್ಯದಲ್ಲಿ ಉದ್ಯೋಗ ಹುಡುಕುತ್ತಿರುವವವರಿಗೆ ಇಲ್ಲಿದೆ ಗುಡ್ ನ್ಯೂಸ್, ಈಗಾಗಲೇ ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಲಾಗುತ್ತದೆ. ಒಟ್ಟಾರೆಯಾಗಿ 9 ಸಾವಿರ ಹುದ್ದೆಗಳು ಖಾಲಿ ಇದ್ದು ಇದರಲ್ಲಿ ಈಗಾಗಲೇ 2200 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಲಾಗಿದೆ.
ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸಮಗ್ರ ಮಾಹಿತಿ ನೀಡಿದ್ದು, ಸಾರಿಗೆ ಕ್ಷೇತ್ರದಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಯಮಗಳಲ್ಲಿ 9000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 2000 ಹುದ್ದೆಗಳು ನೇಮಕಾತಿ ಪ್ರಕ್ರಿಯೆಲ್ಲಿವೆ. ಪ್ರಸ್ತುತ ಉಳಿದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ. 5,800 ಹೊಸ ಬಸ್‌ಗಳ ಖರೀದಿ ಮತ್ತು 2,400 ಬಸ್‌ಗಳ ಖರೀದಿಯನ್ನು ಪೂರ್ಣಗೊಳಿಸುವುದಾಗಿ ಅವರು ಘೋಷಿಸಿದರು.
ಬಸ್ ಪ್ರಯಾಣ ದರ ಏರಿಕೆ ಕುರಿತು ಸಾರಿಗೆ ಸಚಿವರು, ಬಸ್ ಪ್ರಯಾಣ ದರ ಹೆಚ್ಚಿಸುವ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಅವರ ಪ್ರಕಾರ, ಟಿಕೆಟ್ ದರವನ್ನು ಹೆಚ್ಚಿಸುವ ಮತ್ತು ನಾಲ್ಕು ನಿಯಮಗಳ ಅನುಸಾರ ಪ್ರಸ್ತಾವನೆಗಳನ್ನು ಸ್ವೀಕರಿಸುವ ವಿಷಯವನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬುದಾಗಿ ತಿಳಿಸಲಾಗಿದೆ.