ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಇದರ ಕುರಿತಾಗಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ವೇತನ ಈ ಎಲ್ಲಾ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ ಒಟ್ಟೂ ಎರಡು ನೂರು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗಳ ವಿವರ ನೋಡುವುದಾದರೆ, ಗ್ರಾಜುವೆಟ್ ಟ್ರೈನಿ ನೂರಾ ಇಪ್ಪತ್ತೈದು ಹುದ್ದೆಗಳು ಹಾಗೂ ಡಿಪ್ಲೊಮಾ ಟ್ರೈನಿ ಯ ಎಪ್ಪತ್ತೈದು ಹುದ್ದೆಗಳು ಖಾಲಿ ಇದ್ದಿರುತ್ತವೆ. ಪುರುಷರು ಹಾಗೂ ಮಹಿಳೆಯರೂ ಇಬ್ಬರೂ ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇಲ್ಲಿ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 27/09/2021 ಆಗಿದೆ. ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17/10/2021 ಆಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಾಗಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಫಲಿತಾಂಶವನ್ನು 09/11/2021 ರಂದು ತಿಳಿಸಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಭರಿಸಬೇಕಿಲ್ಲ.

ಆಯ್ಕೆಯ ವಿಧಾನ ನೋಡುವುದಾದರೆ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಒಟ್ಟೂ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಹತೆ ನೋಡುವುದಾದರೆ, ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ,ಇ, ಎಲೆಕ್ಟ್ರಿಕ್ ಎಂಜಿನಿಯರಿಂಗ್ ಪದವಿ ಡಿಪ್ಲೊಮಾ ಮತ್ತು ಎಲೆಕ್ಟ್ರಿಕ್ ಎಂಜಿನಿಯರಿಂಗ್ ನಲ್ಲಿ ಪಾಸ್ ಆಗಿರಬೇಕು.

ಮುಖ್ಯವಾಗಿ ಗಮನಿಸಬೇಕಾದ ವಿಷಯ ಎಂದರೆ, ಇದು ಒಂದು ವರ್ಷದ ಮಟ್ಟಿಗೆ ಮಾತ್ರ ನೀಡುವ ಕೆಲಸ ಆಗಿದ್ದು ಒಂದು ವರ್ಷಗಳ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಇಲ್ಲಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು ಐದರಿಂದ ಏಳು ಸಾವಿರದವರೆಗೆ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *