ವಿಕೆಟ್‌ ಕೀಪಿಂಗ್‌ ನಲ್ಲಿ ಸಂಜು, ಪಂಥ್ ಗಿಂತ ಈ ಕನ್ನಡಿಗನೇ ಬೆಸ್ಟ್ ಅಂತೇ

0 0

ಟೀಮ್‌ ಇಂಡಿಯಾ ಸೀಮಿತ ಓವರ್‌ಗಳ ತಂಡದ ವಿಕೆಟ್‌ ಕೀಪಿಂಗ್‌ಗೆ ರಿಷಭ್‌ ಪಂತ್‌ ಹಾಗೂ ಸಂಜು ಸ್ಯಾಮ್ಸನ್‌ ಅವರನ್ನು ಹೊರಗಿಟ್ಟು ಕೆ.ಎಲ್‌ ರಾಹುಲ್‌ಗೆ ಅವಕಾಶ ನೀಡುವುದು ಒಳ್ಳೆಯದು ಎಂದು ಭಾರತ ತಂಡದ ಮಾಜಿ ಆಟಗಾರರಾದ ರೋಹನ್‌ ಗವಾಸ್ಕರ್‌ ಹಾಗೂ ಅಜಯ್‌ ರಾತ್ರ ಹೇಳಿದ್ದಾರೆ. ಪಂತ್‌, ಸಂಜು‌ಗಿಂತ ಭಾರತ ತಂಡದ ಕೀಪಿಂಗ್‌ಗೆ ಈತನೇ ಬೆಸ್ಟ್ ಕನ್ನಡಿಗನ ಪರ ನಿಂತ ಮಾಜಿ ಆಟಗಾರರು ಏನೆಂದು ಹೇಳಿದ್ದಾರೆ ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹದಿಮೂರನೇ ಆವೃತ್ತಿಯು ಮುಕ್ತಾಯ ಹೊಂದಿದೆ. ಮಹೇಂದ್ರ ಸಿಂಗ್‌ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟೀಮ್‌ ಇಂಡಿಯಾದಲ್ಲಿ ಅವರ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ. ರಿಷಭ್‌ ಪಂತ್‌, ವೃದ್ದಿಮನ್‌ ಸಹಾ, ಸಂಜು ಸ್ಯಾಮ್ಸನ್‌ ಹಾಗೂ ಕೆ.ಎಲ್‌ ರಾಹುಲ್‌ ನಡುವೆ ಸ್ಪರ್ಧೆ ನಡೆಯುತ್ತಿದೆ.

ಈ ಗುಂಪಿನಲ್ಲಿ ಕಳೆದ ಐಪಿಎಲ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ಹಾಗೂ ವಿಕೆಟ್‌ ಕೀಪಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಕೆ.ಎಲ್‌ ರಾಹುಲ್‌ ಒಂದು ಹೆಜ್ಜೆ ಮುಂಚೂಣಿಯಲ್ಲಿದ್ದಾರೆ. ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್‌ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೆ ವಿಕೆಟ್‌ ಕೀಪರ್‌ ಸ್ಥಾನಕ್ಕೆ ಮೊದಲ ಆಯ್ಕೆ ಎಂದು ಭಾರತ ತಂಡದ ಮಾಜಿ ಆಟಗಾರರಾದ ಅಜಯ್‌ ರಾತ್ರ ಹಾಗೂ ರೋಹನ್‌ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಭ್‌ ಪಂತ್‌ ಅವರಿಗೆ ಕಳೆದ ಎರಡು ವರ್ಷಗಳಿಂದ ಎಂಎಸ್‌ ಧೋನಿ ಸ್ಥಾನಕ್ಕೆ ತುಂಬಾ ಅವಕಾಶಗಳನ್ನು ನೀಡಲಾಗಿತ್ತು. ಆದರೆ ಎಡಗೈ ಬ್ಯಾಟ್ಸ್‌ಮನ್‌ ಸಿಕ್ಕ ಅವಕಾಶಗಳನ್ನು ಕೈ ಚೆಲ್ಲಿಕೊಂಡರು. ರಿಷಭ್‌ ಪಂತ್‌ ಹಾಗೂ ಸಂಜು ಸ್ಯಾಮ್ಸನ್‌ ಇಬ್ಬರೂ ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಇದು ಕೆ.ಎಲ್‌ ರಾಹುಲ್‌ ಲಾಭದಾಯಕವಾಗಿದೆ.

ಕೆಎಲ್ ರಾಹುಲ್ ತಮ್ಮ 6 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದಲ್ಲಿ ಮೂರನೇ ಬಾರಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದಾರೆ. ಅವರು ಕಳೆದ ವರ್ಷ ರಾಜ್‌ಕೋಟ್‌ನಲ್ಲಿ ನಡೆದಿದ್ದ ಎರಡನೇ ಓಡಿಐ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ 52 ಎಸೆತಗಳಲ್ಲಿ 82 ರನ್‌ಗಳನ್ನು ಗಳಿಸಿದ್ದರು. ಅಲ್ಲದೆ, ಅವರು ವಿಕೆಟ್‌ ಕೀಪಿಂಗ್‌ ಮಾಡುವುದರಿಂದ ಮತ್ತೊಬ್ಬ ಆಟಗಾರನಿಗೆ ಅವಕಾಶ ನೀಡಿದಂತಾಗುತ್ತದೆ.

ಕೆ ಎಲ್‌ ರಾಹುಲ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡುವ ಮೂಲಕ ಆರಂಭಿಕರಾಗಿ ಶಿಖರ್‌ ಧವನ್‌ ಜತೆ ಬೇರೊಬ್ಬ ಬ್ಯಾಟ್ಸ್‌ಮನ್‌ ಅನ್ನು ಆಡಿಸುವ ಸಾಧ್ಯತೆ ಇದೆ. ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಓಪನಿಂಗ್‌ ನೀಡುವ ಸಾಧ್ಯತೆ ದಟ್ಟವಾಗಿದೆ. ಇನ್ನು ಇತ್ತೀಚೆಗೆ ಅಷ್ಟೇ ಮುಕ್ತಾಯವಾಗಿದ್ದ ಇಂಡಿಯನ್‌ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ಹಾಗೂ ವಿಕೆಟ್‌ ಕೀಪಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಕೆ.ಎಲ್‌ ರಾಹುಲ್‌ ಅವರನ್ನೇ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಮೊದಲ ಆಯ್ಕೆ ವಿಕೆಟ್‌ ಕೀಪರ್‌ ಆಗಲಿದ್ದಾರೆಂದು ಭಾರತ ತಂಡದ ಮಾಜಿ ಆಟಗಾರರಾದ ರೋಹನ್‌ ಗವಾಸ್ಕರ್‌ ಹಾಗೂ ಅಜಯ್‌ ರಾತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದಾರೆ. ಅಲ್ಲದೆ, ಟಿ20 ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಇದಕ್ಕಿಂತ ಮುಖ್ಯವಾಗಿ ಓಡಿಐ ನಲ್ಲಿ ತಂಡದ ಅಗತ್ಯಕ್ಕೆ ತಕ್ಕಂತೆ ಯಾವುದೇ ಕ್ರಮಾಂಕದಲ್ಲೂ ಆಡಲು ಅವರು ಸಿದ್ದರಿದ್ದಾರೆ. ರಾಹುಲ್‌ ವಿಕಿಟ್‌ ಕೀಪಿಂಗ್‌ಗೆ ಆಯ್ದುಕೊಂಡರೆ, ತಂಡಕ್ಕೆ ಅಗತ್ಯವಿದ್ದರೆ ಹೆಚ್ಚುವರಿ ಬೌಲರ್ ಅಥವಾ ಆಲ್‌ರೌಂಡರ್ ಅನ್ನು ಸೇರಿಸಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ರಾಹುಲ್ ವಿಕೆಟ್ ಕೀಪರ್‌ಗೆ ಅತ್ಯುತ್ತಮ ಆಯ್ಕೆ ಎಂದು ಅಜಯ್ ರಾತ್ರ ತಿಳಿಸಿದರು.

ಕೆ.ಎಲ್‌ ರಾಹುಲ್ ಅವರನ್ನು ತಾತ್ಕಾಲಿಕ ವಿಕೆಟ್‌ ಕೀಪರ್ ಆಗಿ ನೋಡುವುದು ಸರಿಯಲ್ಲ. ಪ್ರಸ್ತುತ ಭಾರತ ತಂಡದಲ್ಲಿ ಕರ್ನಾಟಕ ಆಟಗಾರನ ರೀತಿ ಸನ್ನಿವೇಶಕ್ಕೆ ಹೊಂದಿಕೊಳ್ಳುವ ಬೇರೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಲ್ಲ ಎಂದು ರೋಹನ್ ಗವಾಸ್ಕರ್ ಹೇಳಿದರು. ಎರಡನೇ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸ್ಥಾನಕ್ಕೆ ರಿಷಭ್ ಪಂತ್‌ ಮತ್ತು ಸಂಜು ಸ್ಯಾಮ್ಸನ್‌ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಇದೇ ವೇಳೆ ಅವರು ಹೇಳಿದರು.

ಪಂತ್‌ ಮತ್ತು ಸ್ಯಾಮ್ಸನ್ ಸ್ವಲ್ಪ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ, ಅವರಲ್ಲಿ ಸ್ಥಿರ ಪ್ರದರ್ಶನ ಇಲ್ಲ. ಐಪಿಎಲ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್‌ ವಿಕೆಟ್‌ ಕೀಪಿಂಗ್‌ ಮಾಡಿರಲಿಲ್ಲ. ಈ ಇಬ್ಬರಲ್ಲೂ ಟೀಮ್‌ ಇಂಡಿಯಾ ವಿಕೆಟ್‌ ಕೀಪಿಂಗ್‌ ಆಗುವ ಸಾಮರ್ಥ್ಯವಿದೆ. ಹಾಗಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎರಡನೇ ಸ್ಥಾನಕ್ಕಾಗಿ ಪಂತ್ ಮತ್ತು ಸ್ಯಾಮ್ಸನ್ ನಡುವೆ ತೀವ್ರ ಪೈಪೋಟಿ ಇದೆ ಎಂದು ರೋಹನ್‌ ಗವಾಸ್ಕರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

Leave A Reply

Your email address will not be published.