ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ

0 2

ಕೆ ಎಲ್ ಇ ಸೊಸೈಟಿ ನೇಮಕಾತಿ 2022 ಕೆಎಲ್ ಎಜುಕೇಶನ್ ಸೊಸೈಟಿಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆ ಎಲ್ ಇ ಇದು ಭಾರತದ ಅತಿದೊಡ್ಡ ಶಿಕ್ಷಣ ಸಂಸ್ಥೆಯಾಗಿದೆ. ಇಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪತ್ರಿಕಾ ಪ್ರಕಟಣೆಯನ್ನು ನೀಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲ್ಲಿ ಮಾಹಿತಿಯನ್ನು ಓದಬಹುದು ಮತ್ತು ಅರ್ಜಿ ಸಲ್ಲಿಸಬಹುದಾಗಿದೆ. ಕೆ ಎಲ್ ಇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿದೆ.

ಕೆ ಎಲ್ ಇ ಸೊಸೈಟಿಯು 2022 ರಲ್ಲಿ ಕೆ ಎಲ್ ಇ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ಶೇಷಗರಿ ಕಾಲೇಜ್ ನಲ್ಲಿ ಖಾಲಿಯಿರುವ ಕೆಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ, ಧಾರವಾಡ ಮತ್ತು ಇತರ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ ಡಿ ಎ, ಎಫ್ ಡಿ ಎ, ಅಕೌಂಟೆಂಟ್, ರಿಸೆಪ್ಷನಿಸ್ಟ್ ಮತ್ತು ಇತರ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅನುಭವ ಹೊಂದಿರುವವರಿಗೆ ಮೊದಲ ಪ್ರಾಶಸ್ತ್ಯ ಹೊಂದಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2022 ಆಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳು ಗರಿಷ್ಠ 40 ವರ್ಷಗಳು.

ಅರ್ಜಿಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಇಮೇಲ್ ಐಡಿ ಮೂಲಕ ತಮ್ಮ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತಿ ಅಭ್ಯರ್ಥಿಗಳು ಇಮೇಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. [email protected] ಸಂಬಳ ಮತ್ತು ಸೇವಾ ನಿಯಮಗಳು ಕೆ ಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ನಿಯಮಗಳಂತೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-05-2022 ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ, ಬೆಳಗಾವಿ ಮತ್ತು ಇತರ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಮೆರಿಟ್ ಮತ್ತು ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Leave A Reply

Your email address will not be published.